ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ: ಸಿಎಂ ಸಿದ್ದರಾಮಯ್ಯ

Most read

ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ   ಅದಕ್ಕೆ ನಾಡಪ್ರಭು ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿದ್ದಾರೆ.

 ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ  515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿ,  ನಾಡಪ್ರಭು ಕೆಂಪೇಗೌಡರ515 ನೇ ಜನ್ಮದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಜನಾನುರಾಗಿ ಪ್ರಭುಗಳು. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದಲ್ಲದೆ  ಅನೇಕ ಕೆರೆಗಳನ್ನು ಕಟ್ಟಿಸಿದರು. ಅವರ ಕಾಲದಲ್ಲಿಯೇ ಅತಿ ಹೆಚ್ಚು ದೇವಸ್ಥಾನ, ಕೆರೆಗಳು ನಿರ್ಮಾಣವಾಯಿತು ಎಂದು ಹೇಳಿದ್ದಾರೆ.

ವಿಶೇಷವಾಗಿ,  ವೃತ್ತಿಯಾಧಾರದ ಮೇಲೆ ಚಿಕ್ಕಪೇಟೆ, ದೊಡ್ಡಪೇಟೆ, ನಗರ್ತಪೇಟೆ , ತಿಗಳರಪೇಟೆ, ಬಳೆಪೇಟೆಗಳನ್ನು ನಿರ್ಮಿಸಿ ನಗರವನ್ನು ವ್ಯಾಪಾರ ಕೇಂದ್ರವನ್ನಾಗಿಸಲು ನಾಡಪ್ರಭು ಕೆಂಪೇಗೌಡರು ಪ್ರಯತ್ನಪಟ್ಟಿದ್ದಾರೆ ಎಂಧು ಹೇಳಿದ್ದಾರೆ.

ಕೆಂಪೇಗೌಡರ ಆಡಳಿತ ನಮಗೆ ಪ್ರೇರಣೆ

ಮೊದಲಬಾರಿಗೆ ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ತೀರ್ಮಾನ ಮಾಡಿದ್ದು, ಕೆಂಪೇಗೌಡರ ಪ್ರಾಧಿಕಾರ ರಚನೆ ಮಾಡಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಂದು ಸ್ಮರಿಸಿದರು.  ಕೆಂಪೇಗೌಡರ ಆಡಳಿತ ನಮಗೆಲ್ಲಾ ಪ್ರೇರಣೆಯಾಗಿದೆ ಎಂದು ಹೇಳಿದ್ದಾರೆ.

More articles

Latest article