Sunday, July 14, 2024

40% ಕಮಿಷನ್ ಆರೋಪಕ್ಕೆ ಕೆಂಪಣ್ಣ ದಾಖಲೆ ನೀಡಲಿ : ಸಿಎಂ ಸಿದ್ದರಾಮಯ್ಯ

Most read

ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 40 % ಕಮಿಷನ್ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಮೇಲೆ ಕೂಡ ಆರೋಪ ಮಾಡಿದ್ದಾರೆ.

ಕೆಂಪಣ್ಣ ಆರೋಪಕ್ಕೆ ಇಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಭಗೀರಥ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪಣ್ಣ 40 % ಕಮಿಷನ್ ಸರ್ಕಾರವೆಂದು ಆರೋಪ ಮಾಡಿದ್ದಕ್ಕೆ, ನಾಗಮೋಹನ್ ದಾಸ್ ಕಮಿಷನ್ ಮಾಡಿದ್ದೇವೆ, ದಾಖಲೆ ನೀಡಲಿ. 40% ಭ್ರಷ್ಟಾಚಾರ ಇದ್ದರೆ ದಾಖಲೆ ನೀಡಲಿ, ಅಧಿಕಾರಿಗಳು ಕೇಳುತ್ತಾರೆ ಎಂದಿದ್ದಾರೆ. ಅಂಥವರ ವಿರುದ್ದ ದೂರು ನೀಡಲಿ ಎಂದರು.

ಅನುದಾನದ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಗೆ ಹೋಗುವ ಆಲೋಚನೆ ಇಲ್ಲ. ನಮಗೆ ಅನ್ಯಾಯ ಆಗಿರುವುದು ನಿಜ.ನಾವು 100 ರೂಪಾಯಿ ತೆರಿಗೆ ಕೊಟ್ಟರೆ 12 ರೂಪಾಯಿ ಮಾತ್ರ ಸಿಗುತ್ತಿದೆ. ಇನ್ನುಳಿದ 88 ರೂಪಾಯಿ ಕೇಂದ್ರಕ್ಕೆ ಹೋಗುತ್ತದೆ. ಗುಜರಾತ್ ಸಿಎಂ ಆದಾಗ ತೆರಿಗೆ ನಮ್ಮ ರಾಜ್ಯದ್ದು, ನಾವೇ ವಸೂಲಿ ಮಾಡುತ್ತೇವೆ ಎಂದರು. ಇದನ್ನ ಹೇಳಿದ್ದು ಮಿಸ್ಟರ್ ಮೋದಿ. ಈಗ ದೇಶ ವಿಭಜನೆ ಎಂದು ಹೇಳುತ್ತಿದ್ದಾರೆ. ನಮ್ಮ ಪಾಲು ನಾವು ಕೇಳಿದ್ರೆ ದೇಶ ವಿಭಜನೆ ಎನ್ನುತ್ತಾರೆ.

ದೇಶ ವಿಭಜನೆ ಮಾಡಲು ಹೊರಟವರು ಮೋದಿ ಅಲ್ವ ಎಂದು ಪ್ರಶ್ನೆ ಹಾಕಿದರು. ನಿಮಗೆ ಕನ್ನಡಿಗರಾಗಿ ಕೋಪ ಬರಲ್ವಾ ಎಂದು ಇದೇ ಸಂದರ್ಭದಲ್ಲಿ ರಾಜ್ಯದ ಸಂಸದರಿಗೆ ಸಿಎಂ ಕುಟುಕಿದರು.

ದೇಶ ವಿಭಜನೆ ಹೇಳಿಕೆ ನೀಡುವವರನ್ನು ಕೊಲ್ಲುವ ಕಾನೂನು ತರಬೇಕು ಎನ್ನುವ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಈಶ್ವರಪ್ಪನವರಿಗೆ ಕಡಿ, ಬಡಿ, ತರಿ ಇದು ಬಿಟ್ಟು ಬೇರೆ ಭಾಷೆ ಗೊತ್ತಿಲ್ಲ. ಈಶ್ವರಪ್ಪನ ವಿರುದ್ದ ಕ್ರಮ ತೆಗೆದುಕೊಳ್ಳುತ್ತೇವೆ. ಕಡಿ, ಬಡಿ, ಕೊಲ್ಲು, ಕತ್ತರಿಸು ಭಾಷೆ ಬಿಟ್ಟು ಬಿಜೆಪಿಗೆ ಏನು ಬರಲ್ಲ. ನನಗೆ ಆರ್‌ಎಸ್‌ಎಸ್ ಟ್ರೈನಿಂಗ್ ಆಗಿದೆ ಎನ್ನುತ್ತಾರೆ. ಇದೇನಾ ಟ್ರೈನಿಂಗ್ ಆಗಿರುವುದು ಈಶ್ವರಪ್ಪ? ಎಂದು ಪ್ರಶ್ನಿಸಿದರು.

More articles

Latest article