Wednesday, December 11, 2024

ಪಿರಿಯಾಪಟ್ಟಣದ ಮಸಣಿಕಮ್ಮ ದೇವಾಲಯಕ್ಕೆ ಭೇಟಿ ನೀಡಿದ ಎಸ್.‌ ಜಾನಕಿ

Most read

ಪಿರಿಯಾಪಟ್ಟಣ: ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಗಾನ ಕೋಗಿಲೆ ಎಸ್ ಜಾನಕಿ ಅವರು ಪಿರಿಯಾಪಟ್ಟಣದ ಶಕ್ತಿ ದೇವತೆ ಮಸಣಿಕಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಸಣಿಕಮ್ಮ ದೇವಿಗೆ ಸೀರೆಯನ್ನು ಹರಕೆಯ ರೂಪದಲ್ಲಿ ನೀಡಿ  ದೇವಿಯ ಆಶೀರ್ವಾದ ಪಡೆದುಕೊಂಡರು.

ದೇಗುಲದ ಅರ್ಚಕರು ಎಸ್ ಜಾನಕಿಯವರಿಗೆ ಹೂವಿನ ಹಾರ ಹಾಕಿ ಗೌರವ ಸಮರ್ಪಿಸಿದರು. ಬಳಿಕ ಅರ್ಚಕರು  ಜಾನಕಿಯವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಜಾನಕಿಯವರು ಪಿರಿಯಾಪಟ್ಟಣದ ಮಸಣಿಕಮ್ಮ ದೇಗುಲದ ತುಂಬಾ ಕೇಳಿ ತಿಳಿದುಕೊಂಡಿದ್ದೆ. ಆದರೆ ಇದುವರೆಗೂ ಇಲ್ಲಿಗೆ ಬರಲು ಸಾಧ್ಯವಾಗಿರಲಿಲ್ಲ. ಇದೀಗ ದೇಗುಲಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದೇನೆ. ಮಸಣಿಕಮ್ಮ ದೇವಾಲಯಕ್ಕೆ ಭೇಟಿ ನೀಡಿರುವುದು ನನಗೆ ಅಪಾರ ಸಂತಸ ತಂದಿದೆ ಎಂದರು. ಎಸ್ ಜಾನಕಿಯವರು ದೇಗುಲಕ್ಕೆ ಆಗಮಿಸಿರುವ ವಿಚಾರ ತಿಳಿದು ಸುತ್ತಮುತ್ತಲಿನ ಗ್ರಾಮಸ್ಥರು ಮತ್ತು ಅಭಮಾನಿಗಳು ದೇಗುಲದ ಬಳಿ ನರೆದಿದ್ದರು. ತಮ್ಮ ನೆಚ್ಚಿನ ಗಾಯಕಿಯನ್ನು ನೋಡಿ ಸಂತಸಪಟ್ಟರು. ನಂತರ ಜಾನಕಿ ಅವರು ಪಿರಿಯಾಪಟ್ಟಣದ ಪುರಸಭಾ ಸದಸ್ಯ ಪಿ ಎನ್ ವಿನೋದ್ ಅವರ ನಿವಾಸಕ್ಕೆ ತೆರಳಿ ಕೆಲ ಸಮಯ ಕಳೆದರು. ಪಿರಿಯಾಪಟ್ಟಣ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನವೀನ್ ಕುಮಾರ್, ಪುರಸಭೆಯ ಮಾಜಿ ಸದಸ್ಯ ಪಿ ಎನ್ ನಂಜುಂಡಸ್ವಾಮಿ ಸೇರಿದಂತೆ ಇನ್ನಿತರ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.

More articles

Latest article