ಕನ್ನಡಿಗರಿಗೆ ಬೇಷರತ್‌ ಕ್ಷಮೆಯಾಚಿಸುವುದಾಗಿ ಹೇಳಿದ ಗಾಯಕ ಸೋನು ನಿಗಮ್

‌ಬೆಂಗಳೂರು, ಅ.19 : ಗಾಯಕ ಸೋನು ನಿಗಮ್ ಇಂದು ನನ್ನೊಂದಿಗೆ ಮಾತಾಡಿದರು. ತಾವು ಹಿಂದೆ ಮಾಡಿದ ಒಂದು ಮಾತು ಕನ್ನಡಿಗರನ್ನು ಹೇಗೆ ನೋಯಿಸಿದೆ ಎಂಬುದು ಅವರಿಗೆ ಅರ್ಥವಾಗಿದೆ. ಬೇಷರತ್ತಾಗಿ ಕ್ಷಮೆ ಯಾಚಿಸುವುದಾಗಿ ಹೇಳಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್‌ ನಲ್ಲಿ ಪೋಸ್ಟ್‌ ಹಾಕಿರುವ ಟಿ.ಎ. ನಾರಾಯಣಗೌಡರು, ನಾನು ಹಿಂದೆಯೂ ಹೇಳಿದ್ದೇನೆ. ನಾವೆಲ್ಲರೂ ಸೋನು ನಿಗಮ್ ಅವರ ಹಾಡುಗಳನ್ನು ಇಷ್ಟಪಟ್ಟವರು. ಅವರ ಕುರಿತು ವೈಯಕ್ತಿಕವಾಗಿ ಯಾವ ದ್ವೇಷ, ಮುನಿಸು ನಮಗೆ ಇರಲಿಲ್ಲ. ಆ ಒಂದು ಮಾತನ್ನು ಅರಗಿಸಿಕೊಳ್ಳಲು ನಮ್ಮಿಂದ ಆಗಿರಲಿಲ್ಲ. ಅದಕ್ಕಾಗಿ ನಮ್ಮ ಪ್ರತಿಭಟನೆ, ಆಕ್ರೋಶ ಸಹಜವಾಗೆ ಇತ್ತು. ಇದೀಗ ಅವರು ಕ್ಷಮೆ ಯಾಚಿಸಿದ್ದಾರೆ. ಇಲ್ಲಿಗೆ ಇದನ್ನು ಮುಗಿಸುವುದು ಒಳ್ಳೆಯದು. ಕ್ಷಮೆ ಕೇಳಿದವರನ್ನು ಕ್ಷಮಿಸುವುದು ಕನ್ನಡಿಗರ ಔದಾರ್ಯ, ಸಂಸ್ಕಾರ ಎಂದಿದ್ದಾರೆ.

ಘಂಟಸಾಲ, ಪಿ ಬಿ. ಶ್ರೀನಿವಾಸ್, ಯೇಸುದಾಸ್, ಎಸ್. ಜಾನಕಿ, ವಾಣಿ ಜಯರಾಮ್, ಚಿತ್ರಾ ಹೀಗೆ ಅದ್ಭುತ ಗಾಯಕರು ಕನ್ನಡಿಗರಲ್ಲದೆ ಇದ್ದರೂ ನಾವು ಅವರನ್ನು ಅಪಾರವಾಗಿ ಪ್ರೀತಿಸಿದ್ದೇವೆ. ಅವರು ನಮ್ಮ ಕನ್ನಡ ಚಿತ್ರಸಂಗೀತವನ್ನು ಶ್ರೀಮಂತಗೊಳಿಸಿದ ಮಹಾನುಭಾವರು. ಆ ಕೃತಜ್ಞತೆ ಸದಾ ಇರುತ್ತದೆ.

ಸೋನು ನಿಗಮ್ ಕೂಡ ಇದೇ ಸಾಲಿನಲ್ಲಿ ಬರುವ ಮಹಾ ಗಾಯಕರಲ್ಲಿ ಒಬ್ಬರು. ಈ ಕಹಿಘಟನೆಯನ್ನು ಮರೆತುಬಿಡೋಣ. ಕರ್ನಾಟಕ ರಕ್ಷಣಾ ವೇದಿಕೆ ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸುತ್ತದೆ. ಇದು ಎಲ್ಲರಿಗೂ ಒಂದು ಪಾಠ. ನಾನು ವೈಯಕ್ತಿಕವಾಗಿ ಸಂಗೀತ ಪ್ರೇಮಿ. ಸಂಗೀತ ಮನುಷ್ಯನ ಎಲ್ಲಾ ಸಂಕಟಗಳನ್ನು ಮರೆಸುವ ಸಂಜೀವಿನಿ. ಸೋನು ಅವರು ಇನ್ನಷ್ಟು ಕನ್ನಡ ಗೀತೆಗಳನ್ನು ಹಾಡಲಿ, ಕರ್ನಾಟಕದ ನೆಲದಲ್ಲಿ ಅವರ ಕಾರ್ಯಕ್ರಮಗಳು ನಡೆಯಲಿ. ಸಂಗೀತ ನಮ್ಮ ಬದುಕನ್ನು ಇನ್ನಷ್ಟು ಸಹನೀಯ ಗೊಳಿಸಲಿ, ಪ್ರೀತಿ ಗೆಲ್ಲಲಿ ಎಂದು ಹೇಳಿದ್ದಾರೆ.

More articles

Latest article

Most read