Sunday, September 8, 2024

ಮುಂದುವರೆದ ಮಳೆಯ ಅಬ್ಬರ: ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ, ಸಂಚಾರ ಸ್ಥಗಿತ

Most read

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡಗಳು ಕುಸಿಯುತ್ತಲೇ ಇವೆ. ಇಂದು ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್​ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ. ಪರಿಣಾಮ ಒಂದು ಗಂಟೆಯಿಂದಲೂ ಕಿಲೋಮೀಟರ್​ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದೆ. ಕಾರ್ಯಚರಣೆ ಮುಂದುವರೆದಿದೆ.

ಇದೇ ಜು.18 ರಂದು ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿತ್ತು, ಅದೃಷ್ಟವಶಾತ್​ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಿಂದ ಬಚಾವ್​​ ಆಗಿದ್ದರು. ಇದೀಗ ಮತ್ತೆ ಗುಡ್ಡ ಕುಸಿದಿದ್ದು, ಮುನ್ನೆಚ್ಚರಿಕೆಯಾಗಿ ಸಂಚಾರವನ್ನು ನಿಷೇಧಿಸಲಾಗಿದೆ.

More articles

Latest article