Wednesday, December 11, 2024

ಎಸ್. ಎಂ. ಕೃಷ್ಣ ನಿಧನ; ನಾಳೆ ಸರ್ಕಾರಿ ರಜೆ ಘೋಷಣೆ; ಖಾಸಗಿ ಶಾಲೆಗಳಿಗೂ ರಜೆ

Most read

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ, ಬುಧವಾರ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

 ಬೆಂಗಳೂರಿನಲ್ಲಿ ಈ ವಿಷಯ ತಿಳಿಸಿದ ಡಿಸಿಎಂ ಡಿಕೆ ಶಿವಕುಮಾರ್, ನಾಳೆ ಬೆಳಗ್ಗೆ 8 ಗಂಟೆವರೆಗೆ ಬೆಂಗಳೂರಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮದ್ದೂರಿನಲ್ಲಿ ಬೆಳಗ್ಗೆ  10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ  ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಅವರ ಸೋಮನಹಳ್ಳಿಯಲ್ಲಿ  ಸಂಜೆ 4 ಗಂಟೆಗೆ ಅಂತ್ಯಸಂಸ್ಕಾರ ನೆರವೇರಲಿದೆ.

ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಹಿನ್ನೆಲೆಯಲ್ಲಿ   ಖಾಸಗಿ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿದೆ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.

More articles

Latest article