ಸ್ನೇಹಮಹಿ ಕೃಷ್ಣ ಬಂಧಿಸಿ; ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ದೂರು

ಮೈಸೂರು: ಸಾರ್ವಜನಿಕ ವಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೆಟ್ಟ ಅಭಿಪ್ರಾಯ ಮೂಡಿಸುತ್ತಿರುವ ರೌಡಿಶೀಟರ್ ಸ್ನೇಹಮಹಿ ಕೃಷ್ಣ ಅವರನ್ನು ಬಂಧಿಸುವಂತೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಸ್ನೇಹಮಹಿ ಕೃಷ್ಣ ಒಬ್ಬ ರೌಡಿಶೀಟರ್ ಆಗಿದ್ದು, ಆತನ ಮೇಲೆ 44 ಪ್ರಕರಣಗಳಿವೆ. ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ದಾಖಲೆ ಬಿಡುಗಡೆ ಮಾಡುತ್ತಿದ್ದಾನೆ. ಸಾರ್ವಜನಿಕ ವಲಯದಲ್ಲಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸುತ್ತಿದ್ದಾನೆ. ಆದ್ದರಿಂದ ಈತನನ್ನು ಕೂಡಲೇ ಬಂಧಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ರೌಡಿಶೀಟರ್ ಆಗಿರುವ ಈತ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪತ್ನಿ ಪಾರ್ವತಿ ಹೆಸರಿನಲ್ಲಿ ಸುಳ್ಳು ದಾಖಲೆ ಬಿಡುಗಡೆ ಮಾಡುತ್ತಿದ್ದಾನೆ. ಆತ ಬಿಡುಗಡೆ ಮಾಡಿರುವ ಹಣ ಕಟ್ಟಿರುವ ಚಲನ್ ಸುಳ್ಳು ದಾಖಲೆಯಾಗಿದೆ. ಆತ ಬಿಡುಗಡೆ ಮಾಡಿರುವ ದಾಖಲೆಗಳು ಸುಳ್ಳು ಎಂದು ಮುಡಾ ಅಧಿಕಾರಿಗಳೇ ಹೇಳಿದ್ದಾರೆ. ಈತನನ್ನು ಕೂಡಲೇ ಬಂಧಿಸದಿದ್ದರೆ ನಾಳೆಯಿಂದ ಧರಣಿ ಸತ್ಯಾಗ್ರಹ ಮಾಡುತ್ತೇವೆ ಎಂ. ಲಕ್ಷ್ಮಣ್ ಹೇಳಿದ್ದಾರೆ.

More articles

Latest article

Most read