Wednesday, May 22, 2024

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಕ್ರಿಯ: ‘X’ ನಲ್ಲಿ 1M ದಾಟಿದ ಫಾಲೋವರ್ಸ್!

Most read

ಸಾಮಾಜಿಕ ಜಾಲತಾಣಗಳ ಮೂಲಕ ಜನಪ್ರತಿನಿಧಿಗಳು ಜನಸಂಪರ್ಕ ಹೊಂದಿರುತ್ತಾರೆ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಕೂಡ ಸಾಮಾಜಿಕ ಜಾಲತಾಣಗಳ ಮೂಲಕ ಜನರ ಜೊತೆ ಸಕ್ರಿಯವಾಗಿ ಸಂಪರ್ಕದಲ್ಲಿರುತ್ತಾರೆ. ಸಿಎಂ ಸಿದ್ದರಾಮಯ್ಯ ಅವರ ಟ್ವಿಟ್ಟರ್‌ ಫಾಲೋವರ್ಸ್‌ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ.

ಸಿಎಂ ಸಿದ್ದರಾಮಯ್ಯ ಅವರು ಒಂದು ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್‌ಗಳ ಗಡಿ ದಾಟಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳಲ್ಲಿ ಸಂತಸ ತರಿಸಿದೆ.

ಸಿಎಂ ಸಿದ್ದರಾಮಯ್ಯ ಅವರ X ನಲ್ಲಿ 1 ಮಿಲಿಯನ್ ಫಾಲೋವರ್ಸ್‌​​ಗಳಿದ್ದು, ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಕೂಡ ಸಿದ್ದರಾಮಯ್ಯ ಅವರನ್ನು ಫಾಲೋ ಮಾಡುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಮುಖ್ಯಮಂತ್ರಿ ಆಗಿದ್ದ ವೇಳೆ ಜುಲೈ 2017ರಂದು ಟ್ವಿಟ್ಟರ್‌ಗೆ ಕಾಲಿಟ್ಟಿದ್ದರು. ಆಗ ಒಂದು ವರ್ಷದಲ್ಲಿ ಒಂದು ಲಕ್ಷ ಫಾಲೋವರ್ಸ್‌ಗಳನ್ನು ಹೊಂದಿದ್ದರು. ಈಗ ಒಂದು ಮಿಲಿಯನ್ ಫಾಲೋವರ್ಸ್ ದಾಟಿದೆ.

More articles

Latest article