Monday, September 8, 2025

ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ನಿಷೇಧ: ಬೃಹತ್‌ ಪ್ರತಿಭಟನೆ; 14 ಸಾವು, ವ್ಯಾಪಕ ಹಿಂಸಾಚಾರ

Most read

ಕಠ್ಮಂಡು: ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ವಿಧಿಸಿರುವುದನ್ನು ವಾಪಸ್‌ ಪಡೆಯಬೇಕು ಎಂದು ಅಗ್ರಹಿಸಿ ಕಠ್ಮಂಡುವಿನಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 14 ನಾಗರೀಕರು ಮೃತಪಟ್ಟಿದ್ದು, 87 ಮಂದಿ ಗಾಯಗೊಂಡಿದ್ದಾರೆ.

ಕಳೆದ ವಾರ ನಕಲಿ ಖಾತೆಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಸೈಬರ್ ಅಪರಾಧ ಮಾಡಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರ ಎಕ್ಸ್, ಫೇಸ್ಬುಕ್, ವಾಟ್ಸ್‌ ಆಪ್ ಸೇರಿದಂತೆ 26 ಸಾಮಾಜಿಕ ಜಾಲತಾಣಗಳನ್ನು ನೇಪಾಳ ಸರ್ಕಾರ ನಿಷೇಧಿಸಿತ್ತು.

ಸರ್ಕಾರದ ಈ ಕ್ರಮವನ್ನು ಖಂಡಿಸಿ ಸಾರ್ವಜನಿಕರು ವಿಶೇಷವಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಜತೆಗೆ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ ಎಂದೂ ಆರೋಪಿಸುತ್ತಿದ್ದಾರೆ.

ರಾಜಧಾನಿ ಕಂಡುವಿನಲ್ಲಿ ಭಾರಿ ಸಂಖ್ಯೆಯಲ್ಲಿದ್ದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದಾಗ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಸಿಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ನೇಪಾಳ ಸರ್ಕಾರ ಸಂಸತ್ ಭವನ ಸುತ್ತಮುತ್ತ ಹಲವು ಕಿಮೀ ವ್ಯಾಪ್ತಿಯಲ್ಲಿ  ನಿಷೇದಾಜ್ಞೆ ಜಾರಿಗೊಳಿಸಿದೆ.

More articles

Latest article