Friday, December 5, 2025

ಕೆಂಗೇರಿ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸಾಫ್ಟ್‌ ವೇರ್ ಉದ್ಯೋಗಿ: ಸಂಚಾರದಲ್ಲಿ ವ್ಯತ್ಯಯ

Most read

ಬೆಂಗಳೂರು: ನಗರದ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8:15ರ ಸುಮಾರಿಗೆ ರೈಲು ಆಗಮಿಸುತ್ತಿದ್ದಂತೆ ಹಳೀಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ವಿಜಯಪುರ ಜಿಲ್ಲೆ ದೇವರಹಿಪ್ಪರಗಿ  ಮೂಲದ 38 ವರ್ಷದ ಸಾಫ್ಟ್‌ ವೇರ್ ಉದ್ಯೋಗಿ ಶಾಂತನಗೌಡ ಎಂದು ಗುರುತಿಸಲಾಗಿದೆ.

ಶಾಂತಗೌಡ ರಾಜಾಜಿನಗರದಲ್ಲಿ ಪತ್ನಿ ಹಾಗೂ ಪುಟ್ಟ ಮಗುವಿನ ಜತೆ ವಾಸಿಸುತ್ತಿದ್ದರು. ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಮೆಟ್ರೋ ಪಾರ್ಕಿಂಗ್‌ ಪ್ರದೇಶದಲ್ಲಿ ಶಾಂತಗೌಡ ಅವರ ವಾಹನ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ದುರಂತ ಸಂಭವಿಸುತ್ತಿದ್ದಂತೆ ಕೂಡಲೇ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈ ಘಟನೆಯಿಂದಾಗಿ ನೇರಳೆ ಮಾರ್ಗದಲ್ಲಿ ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗಿ, ಚಲ್ಲಘಟ್ಟದಿಂದ ನಾಯಂಡಹಳ್ಳಿವರೆಗೆ ಮೆಟ್ರೋ ಓಡಾಟವನ್ನು ಸ್ಥಗಿತಗೊಳಿಸಲಾಗಿತ್ತು.

More articles

Latest article