ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರಿಂದ ಕನ್ನಡ ಹಾಡುಗಳನ್ನು ಹಾಡಿಸದಿರಲು ಕರ್ನಾಟಕ ಫಿಲಂ ಚೇಂಬರ್ ನಿರ್ಧರಿಸಿದೆ. ಇನ್ನು ಮುಂದೆ ಸೋನು ನಿಗಮ್ ರಿಂದ ಮ್ಯೂಸಿಕಲ್ ನೈಟ್ಸ್ ಮಾಡಿಸುವುದಿಲ್ಲ. ಕರ್ನಾಟಕದ ಯಾವುದೇ ಕಾರ್ಯಕ್ರಮಕ್ಕೆ ಕರೆಸುವಂತಿಲ್ಲ. ಯಾವುದೇ ಖಾಸಗಿ ಕಾರ್ಯಕ್ರಮಗಳಿಗೂ ಅವರಿಗೆ ಆಹ್ವಾನ ನೀಡುವಂತಿಲ್ಲ.
ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ನಂತರ ಮಾತನಾಡಿದ ಅವರು ಘಟನೆ ಬಳಿಕ ಈವರೆಗೂ ಸೋನು ನಿಗಮ್ ಕನ್ನಡಿಗರ ಕ್ಷಮೆ ಕೇಳಿಲ್ಲ. ಈ ಕ್ಷಣದಿಂದಲೇ ಸೋನುಗೆ ಅಸಹಕಾರ ತೋರಬೇಕೆಂದು ನಿರ್ಧಾರ ಮಾಡಲಾಗಿದೆ. ಗಾಯಕ ಸೋನು ನಿಗಮ್ ಗೆ ಇನ್ನೂ ತಮ್ಮ ತಪ್ಪಿನ ಅರಿವಾಗಿಲ್ಲ ಎಂದು ಅವರು ಹೇಳಿದರು.