ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಹಿಂದೆಯೂ ಅವರನ್ನು ಗಡಿಪಾರು ಮಾಡಲಾಗಿತ್ತು. ಆದರೆ ಹೈಕೋರ್ಟ್ ಗಡಿಪಾರು ಆದೇಶವನ್ನು ರದ್ದುಗೊಳಿಸಿತ್ತು. ಇದೀಗ ಮತ್ತೊಮ್ಮೆ ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ತಮ್ಮ ಹಿಂದಿನ ಆದೇಶವನ್ನು ಮಾರ್ಪಡಿಸಿ ಮತ್ತೆ ಗಡಿಪಾರು ಆದೇಶವನ್ನು ಜಾರಿಗೊಳಿಸಿದ್ದಾರೆ. ಈ ಹಿಂದಿನ ಆದೇಶದಂತೆ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಮತ್ತೊಮ್ಮೆ ಗಡೀಪಾರು ಮಾಡಿದ್ದಾರೆ.
ಈ ಹಿಂದೆ ಹೊರಡಿಸಿದ ಆದೇಶದಲ್ಲಿ ಕಾನೂನಾತ್ಮಕ ತೊಡಕುಗಳಿದ್ದವು. ಈ ನಿಯಮಗಳನ್ನು ಸರಿಪಡಿಸಿಕೊಂಡು ಎರಡನೇ ಬಾರಿಗೆ ಆದೇಶ ಹೊರಡಿಸಿದ್ದಾರೆ.
ಸಹಾಯಕ ಆಯುಕ್ತರ ಆದೇಶ ಪ್ರತಿಯನ್ನು ತಿಮರೋಡಿ ಅವರಿಗೆ ಅವರಿಗೆ ಸಲ್ಲಿಸಲು ಉಜಿರೆ ಬಳಿಯ ತಿಮರೋಡಿಯಲ್ಲಿರುವ ಅವರ ನಿವಾಸಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿದರಾದರೂ ಆ ವೇಳೆಗೆ ಮಹೇಶ್ ಶೆಟ್ಟಿ ಮನೆಯಿಂದ ನಾಪತ್ತೆಯಾಗಿದ್ದರು. ಪೊಲೀಸರು ಮನೆಯಲ್ಲಿ ಶೋಧ ನಡೆಸಿದರಾದರೂ ಅವರು ಮನೆಯಲ್ಲಿ ಇರಲಿಲ್ಲ. ಹಾಗಾಗಿ ಮಹೇಶ್ ಶೆಟ್ಟಿ ಅವರ ಮನೆ ಬಾಗಿಲಿಗೆ ನೋಟಿಸ್ ಅಂಟಿಸಲಾಗಿದೆ.
ಕಾನೂನಾತ್ಮಕ ತಡಕುಗಳಿವೆ ಎಂದು ಪುತ್ತೂರು ವಿಭಾಗಾಧಿಕಾರಿ ಹೊರಡಿಸಿದ್ದ ಗಡೀಪಾರು ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು. ಕಾನೂನು ಪ್ರಕಾರ ಹೊಸ ಪ್ರಕ್ರಿಯೆ ನಡೆಸಿ ಆದೇಶ ಹೊರಡಿಸಲು ಹೈಕೋರ್ಟ್ ಸೂಚಿಸಿತ್ತು. ಆ ಪ್ರಕಾರ ಪುತ್ತೂರು ಎಸಿ ಆದೇಶ ಹೊರಡಿಸಿದ್ದರು.

