ಸೌಜನ್ಯ ಪ್ರಕರಣ: ಎನ್. ಶಶಿಕುಮಾರ್ ನೇತೃತ್ವದಲ್ಲಿ ಐವರು ಅಧಿಕಾರಿಗಳ ಎಸ್‌ಐಟಿ ರಚನೆ

ಬೆಂಗಳೂರು ಸೆ. 24: ಸೌಜನ್ಯ ಪ್ರಕರಣದ ಮರುತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಪೊಲೀಸ್ ಮಹಾನಿರೀಕ್ಷಕ ಎನ್. ಶಶಿಕುಮಾರ್, ಐಪಿಎಸ್ ಅವರನ್ನು ತಂಡದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಪೊಲೀಸ್ ಆಯುಕ್ತ ಸಿ.ಕೆ. ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್; ಶ್ರೀಮತಿ ನಿಶಾ ಜೇಮ್ಸ್, ಐಪಿಎಸ್; ಲೋಕೇಶ್ ಜಗಲಸರ್, ಐಪಿಎಸ್ ಹಾಗೂ ವೆಂಕಟೇಶ್ ಪ್ರಸನ್ನ ಅವರನ್ನು SIT ಸದಸ್ಯರನ್ನಾಗಿ ನೇಮಿಸಲಾಗಿದೆ.

ಸುಪ್ರೀಂ ಕೋರ್ಟ್‌ 2026ರ ಸೆಪ್ಟೆಂಬರ್ 21ರಂದು Special Leave Petition (Criminal) No.5763/2026ರಲ್ಲಿ ನೀಡಿದ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೆಪ್ಟೆಂಬರ್ 24ರಂದು ಈ SIT ರಚಿಸಿ ಆದೇಶ ಹೊರಡಿಸಿದೆ. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಬೆಳ್ತಂಗಡಿ ಪೊಲೀಸ್ ಠಾಣೆಯ Crime No.250/2012 ಹಾಗೂ ನಂತರ ಸಿಬಿಐ ಮರುನೋಂದಾಯಿಸಿದ್ದ RC 2(S)/2014/CBI/SCB/CHENNAI ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸಲು SITಗೆ ಜವಾಬ್ದಾರಿ ನೀಡಲಾಗಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಆಧುನಿಕ ತನಿಖಾ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವ ಅಧಿಕಾರಿಗಳನ್ನು ಒಳಗೊಂಡ SIT ರಚಿಸಬೇಕು ಹಾಗೂ ಈ ಹಿಂದೆ ಬೆಳ್ತಂಗಡಿ ಪೊಲೀಸ್, ಸಿಐಡಿ ಅಥವಾ ಸಿಬಿಐ ತನಿಖಾ ತಂಡಗಳಲ್ಲಿ ಭಾಗಿಯಾಗಿದ್ದ ಯಾವುದೇ ಅಧಿಕಾರಿಯನ್ನು ಹೊಸ ತಂಡದಲ್ಲಿ ಸೇರಿಸಬಾರದು ಎಂದು ಸೂಚಿಸಲಾಗಿತ್ತು.

ಇದೇ ವೇಳೆ ಪ್ರಕರಣದಲ್ಲಿ ಸಂತೋಷ್ ರಾವ್ ಈಗಾಗಲೇ ವಿಚಾರಣೆ ಎದುರಿಸಿ ಸೆಷನ್ಸ್ ಕೋರ್ಟ್‌ನಿಂದ ಖುಲಾಸೆಯಾಗಿರುವ ಹಿನ್ನೆಲೆಯಲ್ಲಿ, ಅವರ ವಿರುದ್ಧ ಇದೇ ಪ್ರಕರಣದಲ್ಲಿ ಮತ್ತೊಮ್ಮೆ ತನಿಖೆ ಅಥವಾ ವಿಚಾರಣೆ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಹೊಸ SIT ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ, ಸಂಬಂಧಪಟ್ಟ ನ್ಯಾಯಾಲಯಕ್ಕೆ ಕಾನೂನು ಪ್ರಕಾರ ಪೊಲೀಸ್ ವರದಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ತನಿಖೆಯನ್ನು ಯಾವುದೇ ವ್ಯಕ್ತಿ ಅಥವಾ ಹಿಂದಿನ ಆದೇಶದಲ್ಲಿನ ಅಭಿಪ್ರಾಯಗಳಿಂದ ಪ್ರಭಾವಿತರಾಗದೆ ಸ್ವತಂತ್ರವಾಗಿ ನಡೆಸಬೇಕು ಎಂದೂ ನ್ಯಾಯಾಲಯ ಸೂಚಿಸಿದೆ.

More articles

Latest article

Most read