ಸೌಜನ್ಯ ಪ್ರಕರಣ: SIT ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸೌಜನ್ಯ ತಾಯಿ

ಬೆಂಗಳೂರು: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸರ್ವೋಚ್ಚ ನ್ಯಾಯಾಲಯಕ್ಕೆ ಸೌಜನ್ಯಳ ತಾಯಿ ಕುಸುಮಾವತಿ ಕೃತಜ್ಞತೆ ಸಲ್ಲಿಸಿದ್ದಾರೆ. ಆದರೆ, ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (SIT)ದ ಬಗ್ಗೆ ತಮಗೆ ಅಸಮಾಧಾನವಿದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕುಸುಮಾವತಿ, “ನನ್ನ ಮಗಳು, ಧರ್ಮಸ್ಥಳ ಸೌಜನ್ಯಳಿಗಾದ ದುರಂತದ ಮರುತನಿಖೆಗೆ ಆದೇಶಿಸಿರುವ ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ನಾವು ಎಂದಿಗೂ ಆಭಾರಿಯಾಗಿರುತ್ತೇವೆ” ಎಂದು ಹೇಳಿದ್ದಾರೆ.

“ಮರುತನಿಖೆಗಾಗಿ ರಾಜ್ಯ ಸರ್ಕಾರವು ರಚಿಸಿರುವ ವಿಶೇಷ ತನಿಖಾ ದಳದ ಬಗ್ಗೆ ನಮಗೆ ಅಸಮಾಧಾನವಿದೆ” ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ SIT ಕುರಿತು ಸೌಜನ್ಯ ಕುಟುಂಬದ ಮೊದಲ ಅಧಿಕೃತ ಅಸಮಾಧಾನದ ಹೇಳಿಕೆ ಇದಾಗಿದೆ.

ತನಿಖಾ ತಂಡದ ಕುರಿತು ಕುಸುಮವತಿಯವರಿಗೆ ಯಾಕೆ ಅಸಮಾಧಾನ ಇದೆ ಎಂಬುದನ್ನು ತಿಳಿಸಿಲ್ಲ. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.

More articles

Latest article

Most read