ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಶಾಂತಿಯುತ ಪ್ರತಿಭಟನೆಗೆ ಹೈಕೋರ್ಟ್‌ ಅನುಮತಿ

Most read

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಧರ್ಮಸ್ಥಳದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ಹೈಕೋರ್ಟ್‌ ಅನುಮತಿ ನೀಡಿದೆ. ಪ್ರತಿಭಟನೆಗೆ ಅನುಮತಿ ನೀಡಬಾರದು ಎಂದು ಕೆಲವರು ಹೈಕೋರ್ಟ್‌ ಮೊರೆ ಹೋಗಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಪೀಠ ಈ ಪ್ರಕರಣದಲ್ಲಿ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ. ಆದರೆ ಪ್ರತಿಭಟನಾಕಾರರು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು ಎಂದು ಸೂಚಿಸಿದೆ.

ಈ ಪ್ರಕರಣದಲ್ಲಿ ಧರ್ಮಸ್ಥಳ ಪರವಾಗಿ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಮತ್ತು ವಕೀಲ ರಾಜಶೇಖರ್ ಹಿಳಿಯಾರು ವಾದಿಸಿದರು.

ಪ್ರತಿಭಟನೆ ಹಮ್ಮಿಕೊಂಡಿದ್ದ ಸಂಘಟನೆ ಹೈಕೋರ್ಟ್‌ ಆದೇಶವನ್ನು ಸ್ವಾಗತಿಸಿದೆ. ಸೌಜನ್ಯಗೆ ನ್ಯಾಯಕೊಡಿಸುತ್ತೇವೆ ಎಂದು ಹೇಳಿಕೊಂಡಿದ್ದ ಪ್ರಭಾವಿ ಕುಟುಂಬ ತಡೆಯಾಜ್ಞೆ ನೀಡುವಂತೆ ಕೋರ್ಟ್‌ ಮೊರೆ ಹೋಗಿದ್ದಾದರೂ ಏಕೆ ಎಂದು ಪ್ರಶ್ನಿಸಿದೆ.

2012ರ ಅಕ್ಟೋಬರ್‌ 9ರಂದು ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ಸರಿಯಾಗಿ ನಡೆದಿಲ್ಲ. ಅಪರಾಧಿಗಳಿಗೆ ಶಿಕ್ಷೆ ಆಗಿಲ್ಲ. ಆಕೆಯ ಕುಟುಂಬಕ್ಕೆ ಅನ್ಯಾಯವಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸಿಲ್ಲ. ಮರುತನಿಖೆಯ ಅಗತ್ಯವಿದೆ ಎಂದು ದಶಕದಿಂದಲೂ ಕೂಗು ಕೇಳಿ ಬರುತ್ತಿದೆ.

.

More articles

Latest article