ಬೆಂಗಳೂರು: ಆತ್ಮಹತ್ಯೆಗೆ ಶರಣಾಗಿರುವ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ದೇಹದ ಮರಣೋತ್ತರ ಪರೀಕ್ಷೆ ಎಂ. ಎಸ್. ರಾಮಯ್ಯ ಆಸ್ಪತ್ರೆಯಲ್ಲಿಂದು ನಡೆಯಿತು.
ಮರಣೋತ್ತರ ಪರೀಕ್ಷೆ ನಂತರ ನಿವಾಸಕ್ಕೆ ಜಗದೀಶ್ ಮೃತದೇಹವನ್ನು ಕೊಂಡೊಯ್ಯಲಾಗುವುದು. ನಾಳೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಜೌಟ್ ನಲ್ಲಿರುವ ಸೌಂದರ್ಯ ಜಗದೀಶ್ ನಿವಾಸಕ್ಕೆ ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲ್ ಅದಾವತ್ ಭೇಟಿ ನೀಡಿದರು.
ಹಣಕಾಸಿನ ಮುಗ್ಗಟ್ಟಿನಿಂದ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ನೇಹಿತರು, ರಾಮ್ ಲೀಲಾ ಇತ್ಯಾದಿ ಸಿನಿಮಾಗಳನ್ನು ಅವರು ನಿರ್ಮಿಸಿದ್ದರು. ಅವರ ನಿಧನಕ್ಕೆ ಚಿತ್ರರಂಗದ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.