ಸೇನೆ ಕುರಿತು ಅವಹೇಳನಕಾರಿ ಭಾಷಣ: 2026ರ ಏ.22ರವರೆಗೆ ರಾಹುಲ್ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: 2022 ಲ್ಲಿ ಭಾರತ್‌ ಜೋಡೊ ಯಾತ್ರೆ ನಡೆಸುವಾಗ ಭಾರತ ಸೇನೆ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ವರಿಷ್ಠ, ಲೋಕಸಭೆ  ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್‌ 2026ರ ಏಪ್ರಿಲ್ 22ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ದ್ವಿಸದಸ್ಯ ಪೀಠವು ರಾಹುಲ್ ಸಲ್ಲಿಸಿದ್ದ ಮೇಲ್ಮನವಿಯನ್ನು ಅಂಗೀಕರಿ, ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ವಿಸ್ತರಿಸಿದೆ.

ಭಾರತ್‌ ಜೋಡೊ ಯಾತ್ರೆ ನಡೆಸುವಾಗ ಮಾತನಾಡಿದ್ದ ರಾಹುಲ್‌ ಗಾಂಧಿ ಅವರು, ಭಾರತಕ್ಕೆ ಸೇರಿದ 2,000 ಚ.ಕಿ.ಮೀ ಭೂಮಿಯನ್ನು ಚೀನಾ ಆಕ್ರಮಿಸಿಕೊಂಡಿದೆ. ಜತೆಗೆ 2020ರಲ್ಲಿ ಭಾರತ ಹಾಗೂ ಚೀನಾ ಸೈನಿಕರ ನಡುವೆ ನಡೆದ ಗಾಲ್ವಾನ್‌ ವ್ಯಾಲಿ ಸಂಘರ್ಷದ ಸಂದರ್ಭದಲ್ಲಿ ಚೀನಾದಿಂದ ಅತಿಕ್ರಮಣ ನಡೆದಿದೆ ಎಂದೂ ಅವರು ಆಪಾದಿಸಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್‌ ಅವರಿಗೆ ವಿಚಾರಣಾ ನ್ಯಾಯಾಲಯ ಸಮನ್ಸ್‌ ನೀಡಿತ್ತು. ಈ ಸಮನ್ಸ್ ಪ್ರಶ್ನಿಸಿ ರಾಹುಲ್‌ ಗಾಂಧಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್‌ ಮೇ 29ರಂದು ಮೇಲ್ಮನವಿಯನ್ನು ವಜಾ ಮಾಡಿತ್ತು. ಇದರ ವಿರುದ್ಧ ರಾಹುಲ್‌, ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ನವೆಂಬರ್ 20ರಂದು ರಾಹುಲ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮುಂದಿನ ಆದೇಶದವರೆಗೆ ಕೆಳ ಹಂತದ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಿ ಆದೇಶಿಸಿತ್ತು.

More articles

Latest article

Most read