ಸುಳ್ಳು ಸುದ್ದಿ ಹರಡಿದ ಆರೋಪ: ತಿಮರೋಡಿ, ಮಟ್ಟಣ್ಣವರ್ ವಿರುದ್ಧ ಮತ್ತೊಂದು ಎಫ್‌ಐಆರ್‌

Most read

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಹಿನ್ನೆಲೆಯಲ್ಲಿ ಸೌಜನ್ಯಾ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣವರ್ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ತಿಮರೋಡಿ  ಮತ್ತು ಮಟ್ಟಣ್ಣವರ್ ಸಮಾಜದ ಸ್ವಾಸ್ಥ್ಯ ಕದಡಲು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ ಎಂದು ಧರ್ಮಸ್ಥಳ ಗ್ರಾಮದ ಪ್ರವೀಣ್ ಕೆ.ಆರ್‌ ದೂರು ನೀಡಿದ್ದರು. ಈ ದೂರಿನನ್ವಯ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆ.204, 319(2), 353(2), ಮತ್ತು 3(5) ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಂದು ಜಿಲ್ಲಾ ಎಸ್‌ ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ.

ಯುಟ್ಯೂಬ್‌ ಒಂದರಲ್ಲಿ ಮದನ್ ಬುಗುಡಿ ಎಂಬ ವ್ಯಕ್ತಿಯ ಜತೆ ಮಟ್ಟಣ್ಣವರ್‌  ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ಸೌಹಾರ್ದತೆ ಕದಡುವ ಮಾತುಗಳನ್ನಾಡಿದ್ದಾರೆ ಎಂದು ದೂರಿನಲ್ಲಿ ದೂರುದಾರರು ಉಲ್ಲೇಖಿಸಿದ್ದಾರೆ. ಬ್ಲಾಗರ್‌ ಗಳು ಮತ್ತು ಇತರರ ಜತೆ ಸೇರಿಕೊಂಡು ತಿಮರೋಡಿ ಮತು ಗಿರೀಶ್‌ ಇಬ್ಬರೂ ಸಾಮಾಜಿಕ ಮಾಧ್ಯಮಗಳ ಮೂಲಕ ಸೌಹಾರ್ದ ವಾತಾವರಣವನ್ನು ಹಾಳು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

More articles

Latest article