ಪುರಾಣ ಪ್ರಸಿದ್ಧ, ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅ.4ರಿಂದ ಅಂದರೆ ಇಂದು ಪ್ರಾರಂಭವಾಗಲಿದೆ. ಈ ಹಿನ್ನೆಲೆ, ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೋಳಲು ಆಗಮಿಸಿರುವ ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಗುರುವಾರ ಸಂಜೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು.
ಕಳೆದ ವರ್ಷದಂತೆ ಈ ವರ್ಷವೂ ಮಹೇಂದ್ರ ಆನೆಯು 400 ಕೆ.ಜಿ. ತೂಕದ ಮರದ ಅಂಬಾರಿ ಸೇರಿ ಒಟ್ಟು 650 ಕೆ.ಜಿ. ತೂಕದ ಸರ್ವಾಲಂಕೃತ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗಲಿದೆ. ಈ ಬಾರಿ ಪಟ್ಟಣದಲ್ಲಿ ಶುಕ್ರವಾರ (ಅ.4) ಮಧ್ಯಾಹ್ನ ನಡೆಯುವ ದಸರಾ ಉತ್ಸವದ ಜಂಬೂ ಸವಾರಿಯಲ್ಲಿ ಮೂರು ಆನೆಗಳು ಪಾಲ್ಗೊಳ್ಳಲಿವೆ. ಮಹೇಂದ್ರ, ಹಿರಣ್ಯ ಮತ್ತು ಲಕ್ಷ್ಮಿ ಹೆಸರಿನ ಆನೆಗಳು ಬಂದಿಳಿದಿವೆ.
ಕಳೆದ ವರ್ಷದಂತೆ ಈ ವರ್ಷವೂ ಮಹೇಂದ್ರ ಆನೆಯು 400 ಕೆ.ಜಿ. ತೂಕದ ಮರದ ಅಂಬಾರಿ ಸೇರಿ ಒಟ್ಟು 650 ಕೆ.ಜಿ. ತೂಕದ ಸರ್ವಾಲಂಕೃತ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗಲಿದೆ.
ಮಂಡ್ಯ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಅಕ್ಟೋಬರ್ 4 ರಿಂದ 7 ರವರೆಗೆ ಶ್ರೀರಂಗಪಟ್ಟಣ ದಸರಾ ಮಹೋತ್ಸವ ನಡೆಯಲಿದ್ದು, ಇಂದು ನಡೆಯುವ ಕಾರ್ಯಕ್ರಮದ ವಿವರ ಹೀಗಿದೆ.
ಅಕ್ಟೋಬರ್ 4ರಂದು ಬೆಳಿಗ್ಗೆ 7.00 ಗಂಟೆಗೆ ತಾಲೂಕು ಕ್ರೀಡಾಂಗಣದಿಂದ “ಫಿಟ್ ಇಂಡಿಯಾ ಮ್ಯಾರಥಾನ್” ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯು ಗಂಜಾಂ ಮಾರ್ಗವಾಗಿ ಕರಿಫಟ್ಟ ದೇವಸ್ಥಾನದವರೆಗೆ ಸ್ಪರ್ಧೆ ನಡೆಯಲಿದೆ. 29 ವರ್ಷ ಒಳಗಿನ ಯುವಕ, ಯುವತಿಯರು ಹಾಗೂ 30 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ಸ್ಪರ್ಧೆ ಆಯೋಜಿಸಲಾಗಿದೆ.
ಮಧ್ಯಾಹ್ನ 12:30ಕ್ಕೆ ಶ್ರೀರಂಗಪಟ್ಟಣದ ಕಿರಂಗೂರಿನ ಬನ್ನಿ ಮಂಟಪದಲ್ಲಿ “ನಂದಿ ಧ್ವಜ ಪೂಜೆ” ನಡೆಯಲಿದೆ. ಮಧ್ಯಾಹ್ನ 2:30 ರಿಂದ 3 ರವರೆಗೆ ಕಿರಗೂರಿನ ಬನ್ನಿ ಮಂಟಪದಿಂದ ಶ್ರೀ ಚಾಮುಂಡೇಶ್ವರಿ ದೇವಿಯ ಮೆರವಣಿಗೆ ಚಾಲನೆ ನೀಡಲಾಗುವುದು. ಮೆರವಣಿಗೆಯಲ್ಲಿ ಮಹೇಂದ್ರ (ಅಂಬಾರಿ ಆನೆ) ಹಿರಣ್ಯ ಮತ್ತು ಲಕ್ಷ್ಮಿ (ಆನೆಗಳು) ಇರಲಿದೆ.
ಸಂಜೆ 6 ಗಂಟೆಗೆ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಆವರಣದ ಶ್ರೀರಂಗ ವೇದಿಕೆಯಲ್ಲಿ ದಸರಾ ಮತ್ತು ವೇದಿಕೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ. ರಾತ್ರಿ 8 ಗಂಟೆಗೆ ಸಂಗೀತ ನಿರ್ದೇಶಕ ಹಾಗೂ ಗಾಯಕರಾದ ವಾಸುಕಿ ವೈಭವ್ ತಂಡದಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ