SSLC ಮತ್ತು PUC ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಮಂಡಳಿ

Most read

ಬೆಂಗಳೂರು: 2025ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯುತ್ತಿದ್ದರೆ, ಮಾರ್ಚ್ 21ರಿಂದ ಏಪ್ರಿಲ್ 04-04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿವೆ ಎಂದು ತಿಳಿಸಿದೆ.

SSLC ಪರೀಕ್ಷೆ -1 ವೇಳಾಪಟ್ಟಿ ಹೀಗಿದೆ:

  • ಮಾರ್ಚ್ 21- ಪ್ರಥಮ ಭಾಷೆ
  • ಮಾರ್ಚ್ 24- ಗಣಿತ
  • ಮಾರ್ಚ್ 26- ದ್ವಿತೀಯ ಭಾಷೆ
  • ಮಾರ್ಚ್ 29- ಸಮಾಜ ವಿಜ್ಞಾನ
  • ಏಪ್ರಿಲ್ 2- ವಿಜ್ಞಾನ
  • ಏಪ್ರಿಲ್ 4- ತೃತೀಯ ಭಾಷೆ

ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ

  • ಮಾರ್ಚ್ 1- ಕನ್ನಡ, ಅರೇಬಿಕ್
  • ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
  • ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
  • ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ.

More articles

Latest article