ಬೆಂಗಳೂರು: ಮಾ.18 ರಿಂದ ಏ.2ರವರೆಗೆ ಎಸ್ಸೆಸ್ಸೆಲ್ಸಿ ಹಾಗೂ ಫೆ.28ರಿಂದ ಮಾ.17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿ,15,941 ಪರೀಕ್ಷಾ ಕೇಂದ್ರಗಳಲ್ಲಿ ಪುನರಾವರ್ತಿತ, ಖಾಸಗಿ ಆಭ್ಯರ್ಥಿಗಳು ಒಳಗೊಂಡಂತೆ ಒಟ್ಟು 9,02,889 ಮಂದಿ ಪರೀಕ್ಷೆ ಬರೆಯುತ್ತಿದ್ದಾರೆ. ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಪಾರದರ್ಶಕ ಹಾಗೂ ಸುಗಮವಾಗಿ ಪರೀಕ್ಷೆ ನಡೆಸಲು ಎಲ್ಲ ರೀತಿಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಎಲ್ಲಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಇರಲಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾಹಿತಿ ಹಬ್ಬಿಸಿ ಅಥವಾ ನಕಲಿ ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ದ್ವಿತೀಯು ಪಿಯುಸಿ ಪರೀಕ್ಷೆ ಫೆ.28ರಿಂದ ಮಾ.17ರವರೆಗೆ ನಡೆಯಲಿದೆ. 5,174 ಪರೀಕ್ಷಾ ಕೇಂದ್ರಗಳಲ್ಲಿ 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಏ.25ರಿಂದ ಮೇ 9ರವರೆಗೆ ಪರೀಕ್ಷೆ-2 ನಡೆಯಲಿದೆ. ಅದೇ ರೀತಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಮೇ 18ರಿಂದ 25ರವರೆಗೆ ನಡೆಯಲಿದೆ. 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ ಮೊದಲ ವಾರದಲ್ಲಿ ಅಂತಿಮ ಪ್ರವೇಶ ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.


