ಶಿವಮೊಗ್ಗ: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಹಾಲಿ ನಡೆಯುತ್ತಿರುವಂತೆ ವರ್ಷಕ್ಕೆ ಮೂರು ಬಾರಿ ಪರೀಖ್ಷೆ ನಡೆಯಲಿದ್ದು, ಎರಡು ಬಾರಿಗೆ ಇಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಇನ್ನು ಮುಂದೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ಮಾತ್ರ ನಡೆಸಲಾಗುತ್ತದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಇದರಿಂದ ಮಕ್ಕಳು ಮತ್ತು ಪೋಷಕರಲ್ಲಿ ವಿನಾಕಾರಣ ಗೊಂದಲ ಉಂಟಾಗಲಿದೆ. ಮಕ್ಕಳು ಧೈರ್ಯ ಕಳೆದುಕೊಳ್ಳಲಿದ್ದಾರೆ. ಇಂತಹ ಸುದ್ದಿಗಳನ್ನು ಪ್ರಕಟಿಸುವಾಗ ಮಾಧ್ಯಮಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದರು.
ಒಂದುವೇಳೆ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರುವುದಿದ್ದರೆ ಸರ್ಕಾರದ ಮಟ್ಟದಲ್ಲಿತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಮತ್ತು ಸಹಜವಾಗಿ ಮಾಧ್ಯಮಗಳಿಗೆ ತಿಳಿಸಲಾಗುತ್ತದೆ. ಆದ್ದರಿಂದ ಮಾಧ್ಯಮಗಳು ಆತುರಪಡಬಾರದು ಎಂದು ತಿಳಿಸಿದರು
ಅಡಿಕೆಗೆ ಎಲೆಚುಕ್ಕಿ ರೋಗದಿಂದ ನಷ್ಟ ಉಂಟಾಗಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಬೆಳೆಗಾರರಿಗೆ ರೂ.180 ಕೋಟಿ ಮೊತ್ತದ ಪರಿಹಾರ ಪ್ಯಾಕೇಜ್ ನೀಡಲು ಮುಂದಾಗಿದೆ. ಅದರಲ್ಲಿ ರೂ.68 ಕೋಟಿ ಶಿವಮೊಗ್ಗ ಜಿಲ್ಲೆಗೆ ನಿಗದಿಯಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಾಗುವುಉದ ಎಂದು ಮಧು ಬಂಗಾರಪ್ಪ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

