Saturday, July 27, 2024

SSLC, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

Most read

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಏಪ್ರಿಲ್ ​ 06ರ ವರೆಗೆ ನಡೆಯಲಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ.

ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಇರಲಿದೆ.

ಎಲ್ಲ ಪರೀಕ್ಷೇಗೆ ನೋಂದಣಿ ಮಾಡಿಕೊಳ್ಳಲೇ ಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದರು ಒಂದು ಪರೀಕ್ಷೆಗೆ ಹಾಜರಾಗಬೇಕು. ಮೂರು ಎಕ್ಸಾಂನಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ :


ಮಾರ್ಚ್.1 ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ
ಮಾ.4 ಗಣಿತ ಪರೀಕ್ಷೆ
ಮಾ.5 ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
ಮಾ.6 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್ ಪರೀಕ್ಷೆ
ಮಾ.7 ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
ಮಾ.9 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ಪರೀಕ್ಷೆ
ಮಾ.11 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪರೀಕ್ಷೆ
ಮಾ.13 ಇಂಗ್ಲಿಷ್ ಪರೀಕ್ಷೆ
ಮಾ.15 ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
ಮಾ.16 ಅರ್ಥಶಾಸ್ತ್ರ ಪರೀಕ್ಷೆ
ಮಾ.18 ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
ಮಾ.20 ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
ಮಾ.22 ಹಿಂದಿ ಪರೀಕ್ಷೆ

ಎಸ್​ಎಸ್​ಎಲ್​ಸಿ ಪರೀಕ್ಷೆಯ ವೇಳಾಪಟ್ಟಿ :

  • ಮಾರ್ಚ್ 25 – ಪ್ರಥಮ ಭಾಷೆ ಪರೀಕ್ಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು
  • ಮಾ. 26- ಇಂಗ್ಲಿಷ್, + ಇಂಗ್ಲಿಷ್ NCERT
  • ಮಾ. 27- ಸಮಾಜ ವಿಜ್ಞಾನ ಪರೀಕ್ಷೆ.
  • ಮಾ. 30 ರಂದು ವಿಜ್ಞಾನ, ರಾಜ್ಯಶಾಸ್ತ್ರ ಪರೀಕ್ಷೆ.
  • ಏಪ್ರಿಲ್ 2 ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆ.
  • ಏ. 3ರಂದು ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ.

More articles

Latest article