2023 & 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ನಾಳಿಯೇ ಬಿಡುಗಡೆ ಮಾಡುವುದಾಗಿ ಕರ್ನಾಟಕ ಪರೀಕ್ಷಾ ಮಂಡಳಿ ಹೇಳಿದೆ.
2023 & 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಾಗಿ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು, 4.28 ಲಕ್ಷ ಬಾಲಕಿಯರು ಸೇರಿದ್ದರು. ಈಗ ಇವರೆಲ್ಲರ ಫಲಿತಾಂಶವು ಬಿಡುಗಡೆ ಆಗಲು ಕೆಲವೇ ಗಂಟೆ ಬಾಕಿ ಇದೆ.
SSLC ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ 9-05-2024 ಅಂದರೆ ನಾಳೆಯೇ ಫಲಿತಾಂಶ ಬಿಡುಗಡೆಯಾಗಲಿದ್ದು, ಫಲಿತಾಂಶ ನೋಡಲು ನೀವು kseeb.kar.nic.in ಮತ್ತು karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಲು ತಿಳಿಸಲಾಗಿದೆ.