ಹಿಂದಿ ಮಾಸಾಚರಣೆಗೆ ಸ್ಟಾಲಿನ್ ಆಕ್ಷೇಪ; ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಲು ಮೋದಿಗೆ ಮನವಿ

Most read

ಚೆನ್ನೈ: ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವ ಸಮಾರಂಭದ ಜತೆಗೆ ಹಿಂದಿ ಮಾಸಾಚರಣೆಯ ಸಮಾರೋಪವನ್ನೂ ಹಮ್ಮಿಕೊಂಡಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು ಇತರ ಭಾಷೆಗಳನ್ನು ಕೀಳಾಗಿ ಕಾಣುವ ಪ್ರಯತ್ನ ಇದಾಗಿದೆ ಎಂದು ಕಿಡಿ ಕಾರಿದ್ದಾರೆ.

ತಮ್ಮ ಪತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತ ಬಹು ಭಾಷೆಗಳ ದೇಶ. ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಮಾಸವನ್ನು ಆಚರಿಸುವ ಮೂಲಕ ಇತರ ಭಾಷೆಗಳನ್ನು ಕೀಳಾಗಿ ಕಾಣುವ ಪ್ರಯತ್ನ ಸರಿಯಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಂವಿಧಾನವು ಯಾವುದೇ ಭಾಷೆಗೆ ರಾಷ್ಟ್ರೀಯ ಭಾಷಾ ಸ್ಥಾನಮಾನವನ್ನು ನೀಡಿಲ್ಲ ಎನ್ನುವುದನ್ನು ನೆನಪು ಮಾಡಿಕೊಟ್ಟಿರುವ ಸ್ಟಾಲಿನ್ ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಮಾಸಾಚರಣೆಯಂತಹ ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಲ್ಲಿಸಬೇಕು. ಬದಲಾಗಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಗಳನ್ನು ಆಚರಿಸಲು.ಪ್ರೋತ್ಸಾಹ ನೀಡಬೇಕು ಎಂದು ಮೋದಿಗೆ ಬರೆದ ಪತ್ರದಲ್ಲಿ ಸ್ಟಾಲಿನ್ ಮನವಿ ಮಾಡಿಕೊಂಡಿದ್ದಾರೆ.

More articles

Latest article