ಅಮಾನತ್ತಾಗಿದ್ದ ಐಪಿಎಸ್‌ ಅಧಿಕಾರಿಗಳಾದ ಬಿ.ದಯಾನಂದ್, ಶೇಖರ್‌.ಹೆಚ್‌.ಟಿ ಅವರಿಗೆ ಸ್ಥಳ ನಿಯೋಜನೆ

Most read

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಸಂಭವಿಸಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದ ಆರೋಪದಡಿಯಲ್ಲಿ ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಮಾಡಲಾಗಿತ್ತು. ನಂತರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿತ್ತು. ಇದೀಗ ಅಮಾನತು ರದ್ದಾದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.

ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಅವರನ್ನು ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಎಡಿಜಿಪಿಯಾಗಿ ಸ್ಥಳ ನಿಯೋಜನೆ ಮಾಡಲಾಗಿದೆ.  ಮತ್ತೊಬ್ಬ ಐಪಿಎಸ್ ಅಧಿಕಾರಿ ಶೇಖರ್‌.ಹೆಚ್‌.ಟಿ ಅವರನ್ನು ಗುಪ್ತಚರ ಇಲಾಖೆಯ ಎಸ್‌ ಪಿ ಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್​ ಗಿರೀಶ್​ ಡಿವೈಎಸ್‌ ಪಿ ಬಾಲಕೃಷ್ಣ ಅವರಿಗೆ ಸ್ಥಳ ತೋರಿಸಿಲ್ಲ.

More articles

Latest article