Friday, December 6, 2024

ನಿಮ್ಮೆದುರು ಬಂದು ನಿಲ್ತೀನಿ, ಕೊಂದು ಬಿಡಿ ಈಶ್ವರಪ್ಪ: ಡಿ.ಕೆ.ಸುರೇಶ್‌ ಸವಾಲು

Most read

ಬೆಂಗಳೂರು: ನಾನೇ ನಿಮ್ಮ ಮುಂದೆ ಬಂದು ನಿಲ್ತೀನಿ, ಕೊಂದು ಬಿಡಿ ಈಶ್ವರಪ್ಪನವರೇ ಎಂದು ಸಂಸದ ಡಿ.ಕೆ.ಸುರೇಶ್‌ ಸವಾಲು ಒಡ್ಡಿದ್ದಾರೆ.

ಡಿ.ಕೆ.ಸುರೇಶ್‌ ಅವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಇತ್ತೀಚಿಗೆ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್‌ ನಾಯಕ ನಾನೇ ಮುಂದೆ ಬಂದು ನಿಲ್ಲುತ್ತೇನೆ. ನಿಮ್ಮ ಆಸೆ ಈಡೇರಿಸಿಕೊಳ್ಳಿ ಎಂದು ಆಹ್ವಾನ ನೀಡಿದ್ದಾರೆ.

ನಾನು ಭಾರತ ವಿರೋಧಿ ಅಲ್ಲ. ನಾನೂ ಭಾರತ ಒಕ್ಕೂಟದಲ್ಲೇ ಇರುವವರು. ಎಲ್ಲ ವಿಷಯಗಳಲ್ಲಿ ಕರ್ನಾಟಕದ ಮೇಲೆ ಆಗುತ್ತಿರುವ ಅನ್ಯಾಯ ತಡೆಯಲಾಗದೆ ಮಾತನಾಡಿದ್ದೆ. ಅದಕ್ಕಾಗಿ ನನ್ನನ್ನು ಕೊಲ್ಲಬೇಕು ಎಂದರೆ ಏನು ಮಾಡೋದು. ನಾನೇ ಈಶ್ವರಪ್ಪನವರ ಮುಂದೆ ಹೋಗಿ ನಿಲ್ಲುತ್ತೇನೆ. ಕೊಂದು ಬಿಡಲಿ ಎಂದು ಸುರೇಶ್‌ ಹೇಳಿದರು.

ಡಿ.ಕೆ.ಸುರೇಶ್‌ ಅವರನ್ನು ಗುಂಡಿಟ್ಟು ಕೊಲ್ಲಬೇಕು ಎಂಬ ಈಶ್ವರಪ್ಪ ಅವರ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಆದಿಯಾಗಿ ಕಾಂಗ್ರೆಸ್‌ ಮುಖಂಡರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರಲ್ಲದೆ, ಇದು ಆರ್‌ ಎಸ್‌ ಎಸ್‌, ಬಿಜೆಪಿ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಈಶ್ವರಪ್ಪ ವಿರುದ್ಧ ಈಗಾಗಲೇ ಶಿವಮೊಗ್ಗದ ಜಯನಗರ ಪೊಲೀಸ್‌ ಠಾಣೆಯಲ್ಲಿ ಎನ್‌ ಎಸ್‌ ಯುಐ ಕಾರ್ಯಕರ್ತರು ದೂರು ಸಲ್ಲಿಸಿದ್ದು, ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

ಕೆ.ಎಸ್.ಈಶ್ವರಪ್ಪ ಅವರು ಈ ಬಗೆಯ ಹೇಳಿಕೆ ನೀಡುವುದು ಇದೇ ಮೊದಲೇನೂ ಅಲ್ಲ. ಪತ್ರಕರ್ತೆಯೊಬ್ಬರು ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಕುರಿತು ಪ್ರಶ್ನಿಸಿದಾಗ, ಈಗ ನಿನ್ನನ್ನು ಯಾರಾದರೂ ಅತ್ಯಾಚಾರ ಮಾಡಿದರೆ ನಾನೇನು ಮಾಡಲು ಸಾಧ್ಯ ಎಂದು ಹೇಳಿ ವಿವಾದ ಎಬ್ಬಿಸಿದ್ದರು

More articles

Latest article