ಎಂಎಸ್‌ಎಂಇ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಸಚಿವ ಶರಣಬಸಪ್ಪ ದರ್ಶನಾಪುರ್‌

Most read

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಪೀಣ್ಯ ಕೈಗಾರಿಕಾ ಸಂಘ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಇಂಡಿಯಾ ಎಂಎಸ್‌ಎಂಇ ಕಾನ್‌ಕ್ಲೇವ್‌ 2025 ರ ಲೋಗೋ ಅನಾವರಣ ಸಮಾರಂಭದಲ್ಲಿ, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ್ ರವರು ಮಾತನಾಡಿದರು.

ಭಾರತದಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ ಎಂಎಸ್‌ಎಂಇ ಬಹುಮುಖ್ಯವಾದ ಪಾತ್ರವಹಿಸಿದೆ. ಉದ್ಯೋಗಾವಕಾಶವಾಗಿರಲಿ ಅಥವಾ ವಿವಿಧ ವಲಯಗಳಲ್ಲಿ ಎಂಎಸ್‌ಎಂಇಯು ತನ್ನದೇ ಆದ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದರು. ಎಫ್‌ ಕೆಸಿಸಿಐ, ಕಾಸಿಯಾ, ಮತ್ತು ಪಿಐಎ ಈ ಮೂರೂ ಸಂಸ್ಥೆಗಳು ಒಟ್ಟಾಗಿ ಸೇರಿ ಆಯೋಜಿಸುತ್ತಿರುವ ಇಂಡಿಯಾ ಎಂಎಸ್‌ ಎಂಇ ಕಾನ್‌ ಕ್ಲೇವ್‌- 2025 ರ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಮತ್ತು ನನ್ನ ಇಲಾಖೆ ಸಂಪೂರ್ಣವಾಗಿ ಸಹಕಾರ ನೀಡುತ್ತದೆ ಎಂದು ತಿಳಿಸಿದರು.

ಎಂಎಸ್‌ ಎಂಇ ಗಳಿಗೆ ರಾಜ್ಯ ಸರ್ಕಾರವಾಗಲೀ ಕೇಂದ್ರ ಸರ್ಕಾರವಾಗಲೀ ಹೆಚ್ಚಿನ ಶಕ್ತಿ ತುಂಬಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷವಾಗಿ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ಹಲವಾರು ತೊಂದರೆ ಅನುಭವಿಸುತ್ತಿದ್ದು, ರಾಜ್ಯದಲ್ಲಿ ಎಂಎಸ್‌ ಎಂಇ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆಸಕ್ತಿ ವಹಿಸಿದೆ. ಎಂಎಸ್‌ ಎಂಇಯ ಹೆಚ್ಚಿನ ರೀತಿಯ ಸಮಸ್ಯೆಗಳಿಗೆ ಸ್ಪಂದಿಸಬೇಕು ಮತ್ತು ಹಾಗೂ ಪರಿಹಾರ ನೀಡಬೇಕಾಗಿದೆ ಎಂದರು.

ಇತ್ತೀಚೆಗೆ ರಾಜ್ಯ ಸರ್ಕಾರದ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ನಾನು ಸನ್ಮಾನ್ಯ ಮುಖ್ಯಮಂತ್ರಿಗಳವರೊಂದಿಗೆ ಚರ್ಚಿಸಿದ್ದೇನೆ. ಅದರಲ್ಲೂ ವಿಶೇಷವಾಗಿ ಪೀಣ್ಯ ಪ್ರದೇಶದಲ್ಲಿ ಹಾಗೂ ಇನ್ನೂ ಹಲವಾರು ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಶೀಘ್ರದಲ್ಲೇ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ.
ಇದೇ ಸಂದರ್ಭದಲ್ಲಿ ಸಚಿವರು ಇಂಡಿಯಾ ಎಂಎಸ್‌ಎಂಇ ಕಾನ್‌ ಕ್ಲೇವ್‌ 2025 ರ ಲೋಗೋ ಅನಾವರಣಗೊಳಿಸಿದರು.

ಕಾರ್ಯಕ್ರಮದಲ್ಲಿ ಎಫ್‌ ಕೆಸಿಸಿಐನ ಅಧ್ಯಕ್ಷ ಎಂ.ಜಿ, ಬಾಲಕೃಷ್ಣ ರವರು ಭಾಷಣ ಮಾಡುತ್ತಾ, ಮೂರು ಸಂಸ್ಥೆಗಳು ಆಯೋಜಿಸುತ್ತಿರುವ ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರವು ಸಹಕಾರ ನೀಡಬೇಕೆಂದು ಕೇಂದ್ರ ಸರ್ಕಾರದ ಸಹಕಾರಕ್ಕೂ ಮನವಿ ಮಾಡಿಕೊಂಡರು.

ಕಾರ್ಯಕ್ರಮದಲ್ಲಿ ಎಫ್‌ ಕೆಸಿಸಿಐ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ, ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜಗೋಪಾಲ್‌, ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಶಿವಕುಮಾರ್‌ ಉಪಸ್ಥಿತರಿದ್ದರು.

More articles

Latest article