ರಾಜ್ಯ ಸರ್ಕಾರದ ವಿರುದ್ಧ ಕೋಲಾರದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಪ್ರತಿಭಟನೆ

ಕೋಲಾರ: ಹಾಲು, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮ ಅವ್ಯವಹಾರ ವಿರೋಧಿಸಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಇಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಕೋಲಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಹಸುಗಳನ್ನು ಕರೆತಂದು ಕಾರ್ಯಕರ್ತರು ಹಾಲು ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನಸಭಾ ವಿರೋಧ ಪಕ್ಷದ ನಾಯಕ ಅಶೋಕ, ಮಾಜಿ ಸಂಸದ ಎಸ್ ಮುನಿಸ್ವಾಮಿ, ಮಾಜಿ ಶಾಸಕ ವರ್ತೂರು ಪ್ರಕಾಶ್, ವಿಧಾನಪರಿಷತ್ ಸದಸ್ಯ, ಜೆಡಿಎಸ್ ಶಾಸಕ ಗೋವಿಂದರಾಜು, ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

More articles

Latest article

Most read