ಬೆಂಗಳೂರು: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೊಡ್ಡಬಳ್ಳಾಪುರ ಇವರು ನೀಡುವ ರಾಜ್ಯಮಟ್ಟದ ಜೀವಮಾನ ಸಾಧನ ಶ್ರೀ ಪ್ರಶಸ್ತಿ 2024 ಅನ್ನು ಡಾ. ಪ್ರಕಾಶ್ ನಾಥ ಸ್ವಾಮಿ ಜಿಯವರಿಗೆ ಮತ್ತು ರಾಜ್ಯ ಮಟ್ಟದ ಹೆಚ್ಎನ್ ಪ್ರಶಸ್ತಿ 2024 ಅನ್ನು ಜೆ ಸ್ವಾಮಿ ರೆಡ್ಡಿ ಅವರಿಗೆ ಹಾಗೂ ಮಹಿಳಾ ಸಾಧಕರಿಗೆ ರಾಜ್ಯಮಟ್ಟದ ಚೈತನ್ಯಶ್ರೀ ಪ್ರಶಸ್ತಿ 2024 ಅನ್ನು ಆರತಿ ಚೌದರಿ ರವರಿಗೆ ನೀಡಿ ಪುರಸ್ಕರಿಸಲಾಗುತ್ತದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಪಿ.ಜಿ. ಜಗದೀಶ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ವತಿಯಿಂದ ಇದೇ ತಿಂಗಳು 28 ಮತ್ತು 29 ರಂದು ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ಮಾಜಿ ಸಚಿವೆ ಹಾಗೂ ವಿಧಾನ ಪರಿಷತ್ ಸದಸ್ಯರಾದ ಉಮಾಶ್ರೀ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ. ಯಲಹಂಕ ತಾಲೂಕಿನ ಬಾಗಲೂರು ವಿ.ಜೆ. ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ನಡೆಯುವ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ವಿಶ್ವ ಮಾನವ ಕುವೆಂಪು ದಿನಾಚರಣೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಮ್ಮೇಳನಾಧ್ಯಕ್ಷರಿಗೆ ಗೌರವ ಸಮರ್ಪಣೆ ಮಾಡಲಿದ್ದಾರೆ. ವಿಜ್ಞಾನ ತಂತಜ್ಞಾನ ಸಚಿವ ಎನ್.ಎಸ್. ಬೊಸರಾಜ್, ವಿಜ್ಞಾನ ವಸ್ತು ಪ್ರದರ್ಶನ ಅನಾವರಣ ಮಾಡಲಿದ್ದಾರೆ. ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಜ್ಞಾನಸಿರಿ 2024ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಗಾಮೀಣಾಭಿವೃದ್ಧಿ ಸಚಿವ ಪಿಯಾಂಕ್ ಖರ್ಗೆ ವೈಜ್ಞಾನಿಕ ದಿನಚರಿ 2025 ಬಿಡುಗಡೆ ಮಾಡುವರು. ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಪ್ಲಾನಿಟೋರಿಯಂ ಉದ್ಘಾಟನೆ ಮಾಡುವರು. ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಜೀವಮಾನ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡುವರು. ಶಾಸಕ ಎಸ್.ಆರ್. ವಿಶ್ವನಾಥ 2025 ಕ್ಯಾಲೆಂಡರ್ ಬಿಡುಗಡೆ ಮಾಡುವರು. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಶಾಸಕರು, ವಿಧಾನ ಪರಿಷತ್ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೊಡ್ಡಬಳ್ಳಾಪುರ ಸಹಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ ಕರ್ನಾಟಕ ರಾಜ್ಯ ಖಾಸಗಿ ಶಾಲೆ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಬೆಂಗಳೂರು ಭವಿಷ್ಯದಲ್ಲಿ ವೈಜ್ಞಾನಿಕ ಚಿಂತನೆಯನ್ನು ಮೂಡಿಸುವುದು ಹಾಗೂ ಕಂದಾಚಾರ ವೈಚಾರಿಕ ಪ್ರಜ್ಞೆಗಳನ್ನು ಮುಂದಿನ ಪೀಳಿಗೆಗೆ ಕೊಂಡಯುವುದೇ ಈ ಪರಿಷತ್ತಿನ ಮುಖ್ಯ ಉದ್ದೇಶವಾಗಿದೆ. ಎರಡು ದಿನದ ಸಮ್ಮೇಳನದಲ್ಲಿ ವೈಜ್ಞಾನಿಕ ಪರಿಷತ್ತಿನ ಉಪಾಧ್ಯಕ್ಷರಾದ ಬಿ.ಜಿ. ಅವಟಿ, ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಜಿ.ರಾವ್ ಸೇರಿದಂತೆ ಎಲ್ಲ ಪದಾಧಿಕಾರಿಗಳು ಹಾಜರಿರುವರು ಎಂದು ತಿಳಿಸಿದ್ದಾರೆ.