ಬೆಂಗಳೂರು: ಎಚ್‌ಎಂಟಿ ಸ್ವಾಧಿನದಲ್ಲಿರುವ ರೂ.14,300 ಕೋಟಿ ಮೌಲ್ಯದ ಅರಣ್ಯ ಭೂಮಿಯನ್ನು ಹಿಂಪಡೆಯಲು ಅಗತ್ಯ ಕ್ರಮ ಜರುಗಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ಸಚಿವ ಸಂಪುಟ ಸಭೆಯ ನಂತರ ಸಂಪುಟದ ನಿರ್ಣಯದ ಕುರಿತು ವಿವರಿಸಿದರು.
ಎಚ್‌ಎಂಟಿ ಕಾರ್ಖಾನೆಯು ಬೆಂಗಳೂರಿನಲ್ಲಿ ಹೊಂದಿರುವ ಪ್ರದೇಶಗಳನ್ನು ಕೇಂದ್ರ ಸರ್ಕಾರದ ಇತರೆ ಸಂಸ್ಥೆಗಳಿಗೆ ಹಸ್ತಾಂತರಿಸಲು ನಿರಾಕ್ಷೇಪಣಾ ಪತ್ರ ನೀಡುವ ಕುರಿತು ಅಧಿಕಾರಿಗಳು ತಮ್ಮದೇ ಆದ ನಿರ್ಧಾರ ತೆಗೆದುಕೊಂಡಿದ್ದು ಮತ್ತು ಸಚಿವ ಸಂಪುಟದ ಪೂರ್ವಾನುಮತಿ ಅಥವಾ ಉನ್ನತ ಮಟ್ಟದ ಸಮಿತಿಯ ಅನುಮೋದನೆಯನ್ನು ಪಡೆಯದೇ ಸುಪ್ರಿಂ ಕೋರ್ಟ್ ಗೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹಿಂಪಡೆಯಲು ಸಲ್ಲಿಸಲಾಗಿರುವ ರಾಜ್ಯ ಸರ್ಕಾರದ ಅರ್ಜಿ ಸಲ್ಲಿಕೆಗೆ ಅರಣ್ಯ ಸಚಿವರು ತೆಗೆದುಕೊಂಡಿರುವ ನಿರ್ಣಯಕ್ಕೆ ರಾಜ್ಯ ಸಚಿವ ಸಂಪುಟ ಘಟನೋತ್ತರ ಮಂಜೂರಾತಿ ನೀಡಿದೆ ಎಂದು ಸಚಿವರು ತಿಳಿಸಿದರು.
2915ರಲ್ಲಿ ಅಂದಿನ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿಯಲ್ಲಿ ಹಲವು ಬಾರಿ ಸಭೆಗಳಲ್ಲಿ ಎಚ್‌ಎಂಟಿ ವಶದಲ್ಲಿರುವ ಅರಣ್ಯ ಭೂಮಿಯ ಕುರಿತು ಚರ್ಚೆ ನಡೆಸಲಾಗಿತ್ತು. ದಿನಾಂಕ: 17.02.2018 ರಂದು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಯಲ್ಲಿ ಇನ್ನೂ ಹಸಿರು ಹೊದಿಕೆಯನ್ನು ಹೊಂದಿದ ಅರಣ್ಯ ಭೂಮಿಯನ್ನು ಎಚ್‌ಎಂಟಿ ಸಂಸ್ಥೆಯು ಮಾರಾಟ ಮತ್ತು ಹರಾಜು ಮಾಡುತ್ತಿದ್ದು, ಇದು ಬೆಂಗಳೂರಿಗೆ ಜೀವ ಉಳಿಸುವ ಮತ್ತು ಅತ್ಯಗತ್ಯವಾದ ಉಸಿರಾಟಕಾರಕವಾಗಿದೆ (ಬೆಂಗಳೂರಿನಲ್ಲಿ ಹೆಚ್ಚು ಅಗತ್ಯವಿರುವ ಶ್ವಾಸಕೋಶದ ಸ್ಥಳ) ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ದಿನಾಂಕ: 15.07.2020 ರಂದು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಯಲ್ಲಿ ಈ ಕೆಳಗಿನಂತೆ ಸ್ಪಷ್ಟವಾಗಿ ದಾಖಲಿಸಲಾಗಿದೆ.
“The Additional chief Secretary, Forest, Environment and Ecology Department has been directed to submit a proposal for denotification of such forest areas for cabinet decision after obtaining the opinion of the Advocate General on the sanctions of areas made to various / government institutions prior to 1980”.
ಆದರೆ ಅಧಿಕಾರಿಗಳು ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಂಡಿದ್ದು 2020ರಲ್ಲಿ ವಿವಾದಿತ ಭೂಮಿಯ ಡಿನೊಟಿಫಿಕೇಶನ್ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹಿಂಪಡೆಯುವAತೆ ರಾಜ್ಯ ಸರ್ಕಾರ ಕೋರಿದೆ. ಅಧಿಕಾರಿಗಳು ರೂ14,300 ಕೋಟಿ ಮೌಲ್ಯದ ಅರಣ್ಯ ಭೂಮಿಯನ್ನು ಡಿನೋಟಿಫಿಕೇಶನ್ ಮಾಡಲು ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದು, ಕಾಯ್ದಿರಿಸಿದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಮಧ್ಯಂತರ ಅರ್ಜಿಯನ್ನು ಸಲ್ಲಿಸಿರುವುದು ಕರ್ತವ್ಯ ಲೋಪವಾಗಿರುತ್ತದೆ ಎಂದು ಸಚಿವರು ವಿವರಿಸಿದರು.
ಎಚ್‌ಎಂಟಿ ಸಂಸ್ಥೆಯು ಈ ಎಲ್ಲಾ ಭೂಮಿಯನ್ನು ಇತರೆ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿರುವುದರಿಂದ ರಾಜ್ಯಕ್ಕೆ ಭಾರೀ ಆರ್ಥಿಕ ನಷ್ಟವನ್ನು ಉಂಟಾಗುತ್ತದೆ ಮತ್ತು ಬೆಂಗಳೂರಿಗರಿಗೆ ಶ್ವಾಸಕೋಶದ ಸ್ಥಳವನ್ನು ಕಳೆದುಕೊಳ್ಳುತ್ತದೆ ಎಂಬುದು ಕಾನೂನು ಇಲಾಖೆಯ ಅಭಿಪ್ರಾಯವಾಗಿದೆ ಎಂದು ಸಚಿವರು ತಿಳಿಸಿದರು.