ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ರಾಜ್ಯ ಸ್ಥಾನಮಾನ ಮರುಸ್ಥಾಪಿಸಬೇಕು: ಒಮರ್

Most read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ ಎಂಬ ಸ್ಥಾನಮಾನವು ತಾತ್ಕಾಲಿಕವಾಗಿದ್ದು, ಶೀಘ್ರದಲ್ಲೇ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ವಾಗ್ದಾನವನ್ನು ಕೇಂದ್ರ ಸರ್ಕಾರ ಈಡೇರಿಸಬೇಕು ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ನಮ್ಮ ಪಕ್ಷ ಅಧಿಕಾರಕ್ಕೆ ಬಂದು ಎರಡು ತಿಂಗಳಾಗಿದೆ. ಕೇಂದ್ರಾಡಳಿತದಲ್ಲಿ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ತಿಳಿದುಕೊಳ್ಳಲು ಸಮಯ ಬೇಕಾಯಿತು. ಈಗಿನ ಮತ್ತು ಹಿಂದಿನ ಸ್ವರೂಪಕ್ಕೆ ತುಂಬಾ ವ್ಯತ್ಯಾಸವಿದೆ ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ. ಈಗಾಗಲೇ ನಾವು ನೀಡಿದ ಭರವಸೆಗಳನ್ನು ಜಾರಿಗೊಳಿಸಲು ಪ್ರಾರಂಭಿಸಿದ್ದೇವೆ. ಇದಕ್ಕಾಗಿ ವ್ಯವಸ್ಥೆಯಲ್ಲಿ ಬದಲಾವಣೆಯಾಗಬೇಕಿದೆ. ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ತಾತ್ಕಾಲಿಕ ಎಂದು ನಂಬಿದ್ದೇನೆ ಎಂದು ಅವರು ತಿಳಿಸಿದ್ದಾರೆ.

 ಕೇಂದ್ರ ಸರ್ಕಾರದ ನೀಡಿದ ವಾಗ್ದಾನವನ್ನು ಈಡೇರಿಸುತ್ತದೆ ಎಂಬ ನಂಬಿಕೆಯಿದೆ. ಆದಷ್ಟು ಬೇಗ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈಗ ಒಂದು ವರ್ಷ ಕಳೆದಿದೆ ಎಂದು ಅವರು ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಜನರ ಭಾವನೆಗಳನ್ನು ಗೌರವಿಸಬೇಕು ಮತ್ತು ಅವರ ಆಕಾಂಕ್ಷೆಗಳನ್ನು ಈಡೇರಿಸಬೇಕು ಎಂದು ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

More articles

Latest article