ಸೌಜನ್ಯ ಪರ ಹೋರಾಟಗಾರ ತಿಮರೋಡಿ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್‌

Most read

ಬೆಂಗಳೂರು: ಸೌಜನ್ಯ ಪರ ಹೋರಾಟಗಾರ ,ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ. ನೀಡಿದೆ.

ಸೆ.18ರಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ತಿಮರೋಡಿ ಗಡಿಪಾರಿಗೆ ಆದೇಶ ನೀಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ ತಿಮರೋಡಿ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿದ್ದು, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿ ಪ್ರಕರಣದ ವಿಚಾರಣೆಯನ್ನು ಅ. 8ಕ್ಕೆ ಮುಂದೂಡಿದೆ.

ತಿಮರೋಡಿ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಒಟ್ಟು 32 ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಅವರನ್ನು ಗಡೀಪಾರು ಮಾಡಲಾಗಿತ್ತು.

ತಮರೋಡಿ ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಧರ್ಮಸ್ಥಳ ಪ್ರಕರಣ ಕುರಿತು ಸರ್ಕಾರ ಎಸ್‌ ಐಟಿ ರಚಿಸಿದ ನಂತರ ಇವರು ಮುನ್ನೆಲೆಗೆ ಬಂದಿದ್ದರು. ಪೊಲೀಸರು ಇವರನ್ನೂ ವಿಚಾರಣೆಗೆ ಒಳಪಡಿಸಿದ್ದರು. ಇತ್ತೀಚೆಗೆ ಇವರ ತಿಮರೋಡಿ ಮನೆ ಮೇಲೆ ಎಸ್​ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಆಗ ಇವರ ನಿವಾಸದಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಇವರ ವಿರುದ್ಧ ಸುಮಾರು 32 ಪ್ರಕರಣಗಳು ದಾಖಲಾಗಿದ್ದು ವಿಚಾರಣೆ ಹಂತದಲ್ಲಿವೆ.

More articles

Latest article