ದೆಹಲಿಯಲ್ಲಿ ಗುಡುಗಿದ ಬುಲ್ಡೋಜರ್‌ ಗಳು; ಮಸೀದಿ ಒತ್ತುವರಿ ತೆರವು; ಪೊಲೀಸರ ಮೇಲೆ ಕಲ್ಲು ತೂರಾಟ

Most read

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಮ್ಮೆ ಬುಲ್ಡೋಜರ್‌ ಗಳು ಸದ್ದು ಮಾಡಿವೆ. ಕಳೆದ ತಡರಾತ್ರಿ 1 ಗಂಟೆ ವೇಳೆಗೆ ಇಲ್ಲಿನ ತುರ್ಕಮನ್‌ ಗೇಟ್‌ ನಲ್ಲಿರುವ ಫೈಜ್-ಎ-ಇಲಾಹಿ ಮಸೀದಿ ಹತ್ತಿರ ನಿರ್ಮಿಸಲಾಗಿದ್ದ ಅಕ್ರಮ ಕಟ್ಟಡಗಳನ್ನು  ತೆರವುಗೊಳಿಸಲಾಗಿದೆ. ದೆಹಲಿ ಹೈಕೋರ್ಟ್‌ ಆದೇಶದನ್ವಯ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಈ ಕಾರ್ಯಾಚರಣೆ ನಡೆಸಿದೆ. ಸುಮಾರು 30 ಬುಲ್ಡೋಜರ್‌ ಗಳ ಸಹಾಯದಿಂದ ಮಸೀದಿ ಮತ್ತು ಸುತ್ತಮುತ್ತಲಿನ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ.

ಎಂಸಿಡಿ ಕಾರ್ಯಾಚರಣೆಯನ್ನು ಸ್ಥಳೀಯ ನಿವಾಸಿಗಳು ತೀವ್ರವಾಗಿ ವಿರೋಧಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಲ್ಲು ತೂರಾಟ ನಡೆದಿದ್ದು ಪ್ರತಿಭಟನಕಾರರು ಮತ್ತು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ನಾಲ್ಕೈದು ಮಂದಿಯನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಅಶ್ರುವಾಯು ಸಿಡಿಸಿ ಜನರನ್ನು ಚದುರಿಸಿದ್ದಾರೆ.

More articles

Latest article