ಪಾದಚಾರಿ ಮಾರ್ಗಗಳ ಮರು ಒತ್ತುವರಿ ತಡೆಗೆ ಕಟ್ಟುನಿಟ್ಟಿನ ಕ್ರಮ, ನಗರಪಾಲಿಕೆ ಮಟ್ಟದಲ್ಲಿ ಪೊಲೀಸ್–ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್ ರಚನೆ : ಕೃಷ್ಣ ಬೈರೇಗೌಡ

ಬೆಂಗಳೂರು, ಸೆ. 04 : ನಗರದಾದ್ಯಂತ ತೆರವುಗೊಳಿಸಿದ ಪಾದಚಾರಿ ಮಾರ್ಗಗಳಲ್ಲಿ ಮರು ಒತ್ತುವರಿ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿ ನಗರಪಾಲಿಕೆ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಪಾಲಿಕೆ ಅಧಿಕಾರಿಗಳನ್ನು ಒಳಗೊಂಡ ಜಂಟಿ ಟಾಸ್ಕ್‌ಫೋರ್ಸ್ ರಚಿಸಿ, ನಿರಂತರ ಮೇಲ್ವಿಚಾರಣೆ ಹಾಗೂ ಜಂಟಿ ಕಾರ್ಯಾಚರಣೆ ನಡೆಸಬೇಕೆಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಪಾದಚಾರಿ ಮಾರ್ಗಗಳ ಒತ್ತುವರಿ ಕುರಿತು ಇಂದು ನಡೆದ ವರ್ಚುವಲ್ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಒತ್ತುವರಿ ತೆರವುಗೊಳಿಸಿದ ಬಳಿಕ ಮತ್ತೆ ಅದೇ ಸ್ಥಳದಲ್ಲಿ ಮರು ಒತ್ತುವರಿ ನಡೆಯುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ನಗರಪಾಲಿಕೆ ಮಟ್ಟದಲ್ಲಿ ಜಂಟಿ ಟಾಸ್ಕ್‌ಫೋರ್ಸ್

ಪ್ರತಿ ನಗರಪಾಲಿಕೆ ವ್ಯಾಪ್ತಿಯಲ್ಲಿ ಪೊಲೀಸ್ ಮತ್ತು ಪಾಲಿಕೆ ಅಧಿಕಾರಿಗಳ ಸಮನ್ವಯದೊಂದಿಗೆ ಜಂಟಿ ಟಾಸ್ಕ್‌ಫೋರ್ಸ್ ರಚಿಸಬೇಕು. ತೆರವುಗೊಳಿಸಿದ ಪಾದಚಾರಿ ಮಾರ್ಗಗಳಲ್ಲಿ ನಿಯಮಿತ ಹಾಗೂ ಅನಿರೀಕ್ಷಿತ ಪರಿಶೀಲನೆ ನಡೆಸಿ, ಮರು ಒತ್ತುವರಿ ಕಂಡುಬಂದ ಕೂಡಲೇ ಸ್ಥಳದಲ್ಲೇ ಕ್ರಮ ಕೈಗೊಳ್ಳುವ ವ್ಯವಸ್ಥೆ ರೂಪಿಸಬೇಕು ಎಂದು ಸೂಚಿಸಿದರು.

ಮರು ಒತ್ತುವರಿ ಪ್ರಕರಣಗಳನ್ನು ತಕ್ಷಣ ಗುರುತಿಸಿ, ಫೋಟೋ ಹಾಗೂ ಜಿಯೋ-ಟ್ಯಾಗ್ ಮಾಹಿತಿಯೊಂದಿಗೆ ವರದಿ ಮಾಡುವ ವ್ಯವಸ್ಥೆ ಮಾಡಬೇಕು. ಮಾರ್ಷಲ್‌ಗಳು ಹಾಗೂ ಬೀಟ್ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ನಿಯಮಿತವಾಗಿ ಪರಿಶೀಲನೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.

ಮರು ಒತ್ತುವರಿಗೆ FIR, ಮೆಟೀರಿಯಲ್ ವಶ ಹಾಗೂ ದಂಡ

“ಒತ್ತುವರಿ ತೆರವುಗೊಳಿಸಿದ್ದೇವೆ ಎಂದು ಹೇಳುವುದಷ್ಟೇ ಸಾಕಾಗುವುದಿಲ್ಲ. ತೆರವುಗೊಳಿಸಿದ ಸ್ಥಳದಲ್ಲಿ ಮತ್ತೆ ಒತ್ತುವರಿ ಆಗದಂತೆ ನಿರಂತರ ಮೇಲ್ವಿಚಾರಣೆ ನಡೆಸಬೇಕು. ಮರು ಒತ್ತುವರಿ ಮಾಡುವ ಪುನರಾವರ್ತಿತ ಉಲ್ಲಂಘನಾಕಾರಿಗಳ ವಿರುದ್ಧ FIR ದಾಖಲಿಸಿ, ಮೆಟೀರಿಯಲ್ ವಶಪಡಿಸಿಕೊಂಡು, ನಿಯಮಾನುಸಾರ ಹೆಚ್ಚಿನ ದಂಡ ವಿಧಿಸಬೇಕು” ಎಂದು ಸಚಿವರು ತಿಳಿಸಿದರು.

ಈ ಸಂಬಂಧ ಅಧಿಕಾರಿಗಳ ಜವಾಬ್ದಾರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಿ, ಕೈಗೊಂಡ ಕ್ರಮಗಳ ಕುರಿತು ನಿಯಮಿತವಾಗಿ ಪ್ರಗತಿ ವರದಿ ಪರಿಶೀಲಿಸಬೇಕು ಎಂದು ಸೂಚಿಸಿದರು.

ರಸ್ತೆವಾರು ಸ್ಪಷ್ಟ ಮಾರ್ಗಸೂಚಿ

ಸ್ಟ್ರೀಟ್ ವೆಂಡಿಂಗ್‌ಗೆ ಸಂಬಂಧಿಸಿದಂತೆ ವೆಂಡಿಂಗ್‌ಗೆ ನಿರ್ಬಂಧಿತ ರಸ್ತೆಗಳ ಕುರಿತು ಸ್ಪಷ್ಟತೆ ನೀಡಬೇಕು. ಈ ಕುರಿತು ಸಂಬಂಧಪಟ್ಟ ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಅಧಿಕೃತವಾಗಿ ಮಾಹಿತಿ ನೀಡಬೇಕು ಎಂದು ಸಚಿವರು ಸೂಚಿಸಿದರು.

ಮುಖ್ಯ ಹಾಗೂ ಹೆಚ್ಚಿನ ಸಂಚಾರವಿರುವ ರಸ್ತೆಗಳಲ್ಲಿ ಪಾದಚಾರಿ ಮತ್ತು ವಾಹನ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.

ಸ್ಟ್ರೀಟ್ ವೆಂಡರ್‌ಗಳ ಹೊಸ ಸಮಗ್ರ ಸಮೀಕ್ಷೆ

ಸ್ಟ್ರೀಟ್ ವೆಂಡರ್‌ಗಳಿಗೆ ಸಂಬಂಧಿಸಿದಂತೆ ಹೊಸ ಸಮಗ್ರ ಸಮೀಕ್ಷೆಯನ್ನು ತ್ವರಿತವಾಗಿ ನಡೆಸಬೇಕು. ಸಮೀಕ್ಷೆಯ ಬಳಿಕ ಅರ್ಹತೆ ಹಾಗೂ ಕಾನೂನುಬದ್ಧ ಮಾನದಂಡಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಟೌನ್ ವೆಂಡಿಂಗ್ ಕಮಿಟಿ ರಚನೆ ಸೇರಿದಂತೆ ಬಾಕಿ ಇರುವ ಸಂಬಂಧಿತ ಪ್ರಕ್ರಿಯೆಗಳನ್ನು ಕಾನೂನುಬದ್ಧವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಪಾಲಿಕೆ–ಪೊಲೀಸ್ ಜಂಟಿ ಆದೇಶ ಹೊರಡಿಸಲು ಸೂಚನೆ

ಪಾಲಿಕೆ–ಪೊಲೀಸ್ ಜಂಟಿ ಕಾರ್ಯಾಚರಣೆ, ಟಾಸ್ಕ್‌ಫೋರ್ಸ್ ರಚನೆ, ರಸ್ತೆವಾರು ವ್ಯಾಪ್ತಿ ಗುರುತಿಸುವಿಕೆ, ಮರು ಒತ್ತುವರಿ ಪತ್ತೆ ಹಾಗೂ ಕಾನೂನು ಕ್ರಮಗಳ ಕುರಿತು ಮುಖ್ಯ ಆಯುಕ್ತರ ಮಟ್ಟದಲ್ಲಿ ಜಂಟಿ ಆದೇಶ/ಸರ್ಕ್ಯುಲರ್ ಹೊರಡಿಸಬೇಕು ಎಂದು ಸಚಿವರು ಸೂಚಿಸಿದರು.

ಪ್ರತಿ ಅಧಿಕಾರಿಯ ಜವಾಬ್ದಾರಿ ಮತ್ತು ಕಾರ್ಯವ್ಯಾಪ್ತಿಯನ್ನು ಸ್ಪಷ್ಟವಾಗಿ ನಿಗದಿಪಡಿಸಿ, ಮರು ಒತ್ತುವರಿ ಪ್ರಕರಣಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವಿವರಗಳನ್ನು ನಿಯಮಿತವಾಗಿ ಪರಿಶೀಲಿಸುವ ವ್ಯವಸ್ಥೆ ರೂಪಿಸಬೇಕು ಎಂದು ಕೃಷ್ಣ ಬೈರೇಗೌಡ ಅವರು ನಿರ್ದೇಶನ ನೀಡಿದರು.

More articles

Latest article

Most read