ಇನ್ನು ಮುಂದೆ ನಿಮ್ಮ ಜಿಲ್ಲೆಯ ಯಾವುದೇ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಬಹುದು: ಕೃಷ್ಣ ಭೈರೇಗೌಡ

ಸೆಪ್ಟಂಬರ್ 2 ರಿಂದ “ಎನಿವೇರ್‌ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಮಾಹಿತಿ ನೀಡಿದ ಅವರು, “ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್‌ ರಿಜಿಸ್ಟ್ರಾರ್) ಕಚೇರಿ ಇದೆ. ಆದರೆ, ಈ ಪೈಕಿ 50 ಕಚೇರಿಗಳಲ್ಲಿ ಮಾತ್ರ ಸಿಬ್ಬಂದಿಗಳಿಗೆ ಹೆಚ್ಚು ಕೆಲಸದ ಒತ್ತಡ ಇದೆ. ಹೀಗಾಗಿ ಆ ಕಚೇರಿಗಳಿಗೆ ಬರುವ ಜನರಿಗೆ ಅನಾನುಕೂಲವಾಗುತ್ತಿದೆ. ಸಮಯಕ್ಕೆ ಸರಿಯಾಗಿ ಕೆಲಸ ಆಗಲ್ಲ, ಕಾಯಬೇಕು, ಮಧ್ಯವರ್ತಿಗಳ ಕಾಟ ಇದೆ ಎಂಬ ದೂರುಗಳಿವೆ. ಇದೇ ಕಾರಣಕ್ಕೆ “ಎನಿವೇರ್‌ ನೋಂದಣಿ” ವ್ಯವಸ್ಥೆಗೆ ಚಾಲನೆ ನೀಡಲಾಯಿತು” ಎಂದರು.

ಮುಂದುವರೆದು, “ಆಸ್ತಿ ನೋಂದಣಿಗೆ ಮುಂದಾಗುವ ವ್ಯಕ್ತಿ ತನ್ನ ಜಿಲ್ಲೆ ವ್ಯಾಪ್ತಿಯ, ತನಗೆ ಅನುಕೂಲವಾಗುವ ಹಾಗೂ ಜನ ಸಂದಣಿ ಇಲ್ಲದ ಯಾವುದೇ ಉಪ ನೋಂದಣಿ ಕಚೇರಿಗೆ ತೆರಳಿ ಆನ್‌ಲೈನ್‌ ಮೂಲಕ ಸಮಯ ಕಾಯ್ದಿರಿಸಿ ತನ್ನ ಆಸ್ತಿ ನೋಂದಣಿ ಮಾಡಿಕೊಳ್ಳಲು “ಎನಿವೇರ್” ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಈ ಯೋಜನೆಯನ್ನು ಫೆಬ್ರವರಿಯಿಂದಲೇ ತುಮಕೂರು ಹಾಗೂ ಬೆಳಗಾವಿಯಲ್ಲಿ ಪ್ರಯೋಗಿಕವಾಗಿ ಚಾಲನೆ ನೀಡಲಾಗಿತ್ತು.

ಆ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಎನಿವೇರ್‌ ನೋಂದಣಿಯನ್ನು ಇದೀಗ ಎಲ್ಲಾ ಜಿಲ್ಲೆಯಲ್ಲೂ ವಿಸ್ತರಿಸಲು ನಿರ್ಧರಿಸಲಾಗಿದೆ. ಇದರಿಂದ ಕಚೇರಿಯಲ್ಲಿ ಜನಜಂಗುಳಿ, ಸಿಬ್ಬಂದಿಗಳಿಗೆ ಕೆಲಸದ ಒತ್ತಡ ಕಡಿಮೆ ಮಾಡಿ ಸುಲಲಿತವಾಗಿ ಜನರಿಗೆ ನೋದಂಣಿ ಕೆಲಸ ಆಗಲು ಈ ಯೋಜನೆ ಸಹಕಾರಿಯಾಗಲಿದೆ” ಎಂದು ಅವರು ಮಾಹಿತಿ ನೀಡದರು.

More articles

Latest article

Most read