ಎನ್ ಐ ಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಇಂದು ನಿರ್ಧಾರ; ಸಚಿವ ಪರಮೇಶ್ವರ

Most read

ಬೆಂಗಳೂರು: ಮಂಗಳೂರಿನ ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸುವ ಇಂದು ಸಭೆ ನಡೆಸಿ, ಎನ್ಐಎಗೆ ಕೊಡಬೇಕೇ? ಬೇಡವೇ? ಎಂದು ತೀರ್ಮಾನ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.

ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಪ್ರಕರಣದ ತನಿಖೆಯನ್ನು ಎನ್ ಐ ಎಗೆ ವಹಿಸುವ ಸಂಬಂಧ ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದೆ. ಎನ್ ಐಎಗೆ ಯಾರು ಶಿಫಾರಸು ಮಾಡಿದ್ದಾರೆಂದು ತಿಳಿದಿಲ್ಲ. ಪ್ರಕರಣವನ್ನು ವರ್ಗಾಯಿಸುವಂತೆ ಕೇಂದ್ರ ಗೃಹ ಸಚಿವಾಲಯ ಪತ್ರ ಬರೆದಿದ್ದು, ನಮ್ಮ ಪೊಲೀಸರು ಸಮರ್ಥವಾಗಿ ತನಿಖೆ ನಡೆಸುತ್ತಿದ್ದಾರೆ. ಯಾವ ಆಧಾರದ ಮೇಲೆ ಎನ್ ಐ ಎಗೆ ವಹಿಸುವಂತೆ ಕೇಳಿದ್ದಾರೆಂದು ಗೊತ್ತಿಲ್ಲ ಎಂದರು.

ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ತಡೆ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಆ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ತಿಳಿದಿರುತ್ತದೆ. ಯಾರಿಗೆ ಅನ್ಯಾಯ ಆಗಿದೆ ಎನ್ನುವುದೂ ಗೊತ್ತಿಲ್ಲ ಎಂದರು.
ಗೃಹ ಖಾತೆ ಬದಲಾವಣೆಗೆ ಕೇಳಿರುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅದು ಸುಳ್ಳು ಸುದ್ದಿ. ನಾನು ಖಾತೆ ಬದಲಾವಣೆಗೆ ಕೇಳಿಲ್ಲ. ಕೇಳಿದ್ಧೇನೆ ಎಂದು ಹೇಳಿದ್ದು ಯಾರು ಎಂದು ಗರಂ ಆದರು. ಚಿನ್ನಸೆಅಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣ ನಮಗೆ ಸವಾಲಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ಖಾತೆ ಬದಲಾವಣೆ ಸರಿಯಲ್ಲ. ಈ ಸಂದರ್ಭದಲ್ಲಿ ನಾವು ಗಟ್ಟಿಯಾಗಿ ನಿಲ್ಲಬೇಕು. ಖಾತೆ ಬದಲಾವಣೆಗೆ ಕೇಳಿದ್ದೇನೆ ಎನ್ನುವುದು ಅಪ್ಪಟ ಸುಳ್ಳು ಎಂದು ಹೇಳಿದರು.

ಐಪಿಎಲ್ ವಿಜೇತ ಆರ್ ಸಿ ಬಿ ತಂಡವನ್ನು ವಿಧಾಸೌಧದಲ್ಲಿ ಸನ್ಮಾನಿಸಲು ನಿಮಗೆ ಇಷ್ಟ ಇರಲಿಲ್ಲವೇ ಎಂಬ ಪ್ರಶೆಗೆ ಉತ್ತರಿಸಿದ ಗೃಹ ಸಚಿವರು ಈ ಬಗ್ಗೆ ನಾನು ಏನು ಮಾತನಾಡಲ್ಲ. ಈಗಾಗಲೇ ತನಿಖೆ ಆರಂಭವಾಗಿದೆ. ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿಕುನ್ಹ ಆಯೋಗ ತನಿಖೆ ಮಾಡುತ್ತಿದೆ. ತನಿಖೆ ನಡೆಯುತ್ತಿರುವಾಗ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದರು.

ತುಮಕೂರು ಅಭಿವೃದ್ಧಿ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿದ್ದೇನೆ. ತುಮಕೂರು ನಗರ ಪ್ರವೇಶಿಸುವಾಗ ತಿಳಿದು ಬರುವುದಿಲ್ಲ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಆರ್ಚ್ ಹಾಕಲು ಮನವಿ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.

ತುಮಕೂರು ನಗರಕ್ಕೆ ಮೆಟ್ರೊ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಲಿದೆ. ಉಪ ನಗರ ರೈಲು ಯೋಜನೆಯ ಬಗ್ಗೆ ಚರ್ಚೆಯೂ ನಡೆಯುತ್ತಿದೆ ಎಂದ ಅವರು, ಹೇಮಾವತಿ ಗಲಾಟೆ ವಿವಾದ ವಿಚಾರವಾಗಿ ಮಾತನಾಡಿದ ಅವರು, ಪರ್ಯಾಯ ಮಾರ್ಗ ಹುಡುಕಲು ನಾವು ತೀರ್ಮಾನಿಸಿದ್ದೇವೆ. ನೀರಾವರಿ ಸಚಿವರ ಜತೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

More articles

Latest article