ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಕಳಸದ ರಂಜಿತ್, ನಾಗರಾಜ್, ಸಫ್ವಾನ್, ಕಲಂದರ್ ಶಾಫಿ ಸೇರಿ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 8 ಶಂಕಿತ ಆರೋಪಿಗಳ ಪೈಕಿ ಇಬ್ಬರು ಹಿಂದೂ ಯುವಕರು ಎಂದು ತಿಳಿದು ಬಂದಿದೆ. ವಿಡಿಯೋ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಎಲ್ಲ ಆರೋಪಿಗಳ ವಿಚಾರಣೆಯನ್ನು ತ್ವರಿತಗೊಳಿಸಲಾಗಿದೆ. ವಶಕ್ಕೆ ಪಡೆದಿರುವ ಶಂಕಿತ ಆರೋಪಿಗಳಲ್ಲಿ ಕೆಲವರು ದಕ್ಷಿಣ ಕನ್ನಡದಲ್ಲೇ ಅವಿತುಕೊಂಡಿದ್ದರು ಎಂಬ ಸ್ಪೋಟಕ ಮಾಹಿತಿ ಲಭ್ಯವಾಗಿದೆ.
ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆಯಲ್ಲಿ ಚಿಕ್ಕಮಗಳೂರಿನ ಕಳಸ ಮೂಲದ ರಂಜಿತ್, ನಾಗರಾಜ್ ಸಫ್ವಾನ್, ಕಲಂದರ್ ಶಾಫಿ, ಮುಝಮ್ಮಿಲ್, ರಿಝ್ವಾನ್ ಹಾಗೂ ಷ ಅನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಕಳಸದ ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಇವರು ಕಳೆದ ಒಂದು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.