ಮೈಸೂರಿನಲ್ಲಿ ಪತ್ನಿ, ಇಬ್ಬರು ಮಕ್ಕಳನ್ನು ಕೊಂ* ಆತ್ಮ*ತ್ಯೆ ಮಾಡಿಕೊಂಡ ಪತಿ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.
ಹರೀಶ್, ಪತ್ನಿ ನಿಶ್ಚಿತಾ ಹಾಗೂ 13 ವರ್ಷದ ರಕ್ಷಾ ಹಾಗೂ 6 ವರ್ಷದ ನೆಕ್ಷಾ ಮಕ್ಕಳು ಮೃತರೆಂದು ಗುರುತಿಸಲಾಗಿದೆ.

ಹೆಂಡತಿ ಮಕ್ಕಳ ಬಾಯಿಗೆ ಪ್ಲಾಸ್ಟರ್ ಅಂಟಿಸಿ, ಉಸಿರುಗಟ್ಟಿಸಿ ಕೊಲೆ ಮಾಡಿರುವ ಹರೀಶ್, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರು ನಗರದ ನೂ ಮಾರುತಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಹಾಗೂ ಕೋಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

More articles

Latest article

Most read