ಸುಕ್ಮಾ ಎನ್ ಕೌಂಟರ್; 10 ನಕ್ಸಲರ ಹತ್ಯೆ

ಸುಕ್ಕಾ: ಛತ್ತೀಸಗಢದ ಸುಕ್ಕಾ ಜಿಲ್ಲೆಯಲ್ಲಿ ಇಂದು ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ 10 ನಕ್ಸಲರು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಭೇಜಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತರ್ ವಲಯದ ಪೊಲೀಸ್ ಅಧಿಕಾರಿ ಸುಂದರರಾಜ್ ಪಿ. ಮಾಹಿತಿ ನೀಡಿದ್ದಾರೆ.

ಕೊರಜ್ಗುಡ, ದಾಂತೇಸ್ಪುರಂ, ನಗರಂ, ಭಂಡರ್ಪುರ ಪ್ರದೇಶಗಳ ಗುಡ್ಡಗಾಡಿನಲ್ಲಿ ಕೊಂಟಾ, ಕಿಸ್ತಾರಂ ನಕ್ಸಲ್ ಸಮಿತಿಗೆ ಸೇರಿದ ಮಾವೋವಾದಿಗಳು ಬೀಡು ಬಿಟ್ಟಿರುವುದನ್ನು ಖಚಿತಪಡಿಸಿಕೊಂಡ ನಂತರ ಈ ಕಾರ್ಯಾಚರಣೆ ನಡೆಸಲಾಗಿದೆ. 10 ನಕ್ಸಲರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅಲ್ಲದೆ ಇನ್ಸಾಸ್ ರೈಫಲ್, ಎಕೆ-47 ರೈಫಲ್, ಎಸ್ಎಲ್ಆರ್ ರೈಫಲ್ ಸೇರಿದಂತೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಜಿಲ್ಲಾ ಪೊಲೀಸ್ ಮೀಸಲು ಪಡೆ ಮತ್ತು ಕೇಂದ್ರ ಮೀಸಲು ಪಡೆಯ ಕಾರ್ಯಾಚರಣೆ ಮುಂದುವರೆದಿದೆ.
ಈ ಮೂಲಕ ಸುಕ್ಮಾ ಜಿಲ್ಲೆ ಸೇರಿದಂತೆ ಬಸ್ತರ್ ಪ್ರದೇಶದ 7 ಜಿಲ್ಲೆಗಳಲಿ ಇದುವರೆಗೆ ನಡೆದ ಕಾರ್ಯಾಚರಣೆಯಲ್ಲಿ 207 ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article

Most read