ಇಡಿ ಬಂಧನದ ಭೀತಿಯಲ್ಲಿರುವ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್ ಮೊರೆ

Most read

ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಇ.ಡಿ ಅಧಿಕಾರಿಗಳ ತಂಡವು ತೆರಳಿ ಶೋಧ ಕಾರ್ಯ ನಡೆಸುತ್ತಿವೆ. ಬಂಧನದ ಭೀತಿಯಲ್ಲಿ ಅರವಿಂದ್ ಕೇಜ್ರಿವಾಲ್ ತುರ್ತು ವಿಚಾರಣೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಅವರಿಗೆ ಹೈಕೋರ್ಟ್ ನಲ್ಲಿ ಹಿನ್ನಡೆಯಾದ ಬೆನ್ನಲ್ಲೇ ಇಡಿ ಅಧಿಕಾರಿಗಳು ಸಿಎಂ ನಿವಾಸವನ್ನು ಸುತ್ತುವರೆದಿದ್ದಾರೆ.

ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರಿ ದಿಲ್ಲಿ ಹೈಕೋರ್ಟ್ ನಲ್ಲಿ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಆದರೆ ಕೇಜ್ರಿವಾಲ್ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

ಅಬಕಾರಿ ಹಗರಣ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್ ನೀಡಿತ್ತಾದರೂ, ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿರಲಿಲ್ಲ.

ವಿಚಾರಣೆಗೆ ಹಾಜರಾದರೆ ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಅರವಿಂದ ಕೇಜ್ರಿವಾಲ್ ಹೈಕೋರ್ಟ್ ಮೊರೆಹೋಗಿದ್ದರು. ಆದರೆ ಹೈಕೋರ್ಟ್ ನಲ್ಲೂ ಅವರಿಗೆ ಹಿನ್ನೆಡೆಯಾದ ಹಿನ್ನೆಲೆಯಲ್ಲಿ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಜ್ರಿವಾಲ್ ನಿವಾಸಕ್ಕೆ ಧಾವಿಸಿ ವಿಚಾರಣೆ ನಡೆಸಿದ್ದಾರೆ.

ಇತ್ತೀಚಿನ ಬೆಳವಣಿಗೆಯ ಪ್ರಕಾರ, ಬಲವಂತದ ಕ್ರಮದಿಂದ ಯಾವುದೇ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅವರ ಕಾನೂನು ತಂಡವು ಈ ವಿಷಯದ ಬಗ್ಗೆ ತುರ್ತು ಪಟ್ಟಿ ಮತ್ತು ವಿಚಾರಣೆಯನ್ನು ಕೋರಿದ್ದು ಅರ್ಜಿಯನ್ನು ಕೋರ್ಟ್ ಕೈಗೆತ್ತುಕೊಂಡಿದೆ. ಶೀಘ್ರದಲ್ಲೇ ತೀರ್ಪು ಪ್ರಕಟಿಸಲಿದೆ.

ಬಂಧಿಸುವುದು ಪಕ್ಕ ಎಂದು ಗೊತ್ತಾದ ತಕ್ಷಣ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್ಗೆ ತುರ್ತು ಅರ್ಜಿ ವಿಚಾರಣೆಗೆ ಮನವಿ ಮಾಡಿದ್ದಾರೆ.

ನಾಳೆ ದೆಹಲಿ ವಿಶೇಷ ಅಧಿವೇಶನ ಕರೆದಿರುವ ಸ್ಪೀಕರ್

ನಗರದ ನಿವಾಸಿಗಳು ಎದುರಿಸುತ್ತಿರುವ ಒಳಚರಂಡಿ ಒತ್ತುವರಿ ಮತ್ತು ನೀರು ಸರಬರಾಜು ಸಮಸ್ಯೆಗಳ ಕುರಿತು ಶುಕ್ರವಾರ ದೆಹಲಿಯಲ್ಲಿ ವಿಶೇಷ ವಿಧಾನಸಭೆ ನಡೆಯಲಿದೆ. ಇದಕ್ಕೆ ಮುಖ್ಯಮಂತ್ರಿ ಇರಲಿದ್ದಾರೆಯೇ ಅಥವಾ ವಿಧಾನಸಭೆ ನಡೆಯುತ್ತಿದೆಯೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.

More articles

Latest article