Thursday, May 23, 2024

ಸುಪ್ರೀಂ ಕೋರ್ಟ್‌ ಖ್ಯಾತ ವಕೀಲ ಫಾಲಿ ನಾರಿಮನ್ ನಿಧನ

Most read

ಸುಪ್ರೀಂ ಕೋರ್ಟ್‌ನ (Supreme Court) ಹಿರಿಯ ವಕೀಲ, ಮಾಜಿ ಸಾಲಿಸಿಟರ್‌ ಜನರಲ್‌ ಫಾಲಿ ಎಸ್ ನಾರಿಮನ್ (95) ಅವರು ಬುಧವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು.

ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನ ವಕೀಲರಾಗಿ ವೃತ್ತಿ ಆರಂಭಿಸಿದ್ದ ನಾರಿಮನ್ (Fali S Nariman) ಇವರು 1961 ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಅವರು 70 ವರ್ಷಗಳಿಗೂ ಹೆಚ್ಚು ಕಾಲ ಕಾನೂನು ಅಭ್ಯಾಸ ಮಾಡಿದ್ದಾರೆ.

ಕಾವೇರಿ ಜಲವಿವಾದ ಸಂದರ್ಭದಲ್ಲಿ ಕರ್ನಾಟಕದ (Karnataka) ಪರ ವಾದ ಮಂಡಿಸುತ್ತಿದ್ದ ಇವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತಾರಾಜ್ಯ ನದಿ ನೀರು ಹಂಚಿಕೆಯ ಎಲ್ಲ ವ್ಯಾಜ್ಯಗಳಲ್ಲಿ ರಾಜ್ಯದ ಪರ ವಾದಿಸುತ್ತಿದ್ದ ಇವರಿಗೆ ಅಂತಾರಾಷ್ಟ್ರೀಯ ಜಲತಜ್ಞರೆಂಬ ಖ್ಯಾತಿಯೂ ಬಂದಿತ್ತು.

More articles

Latest article