ನವದೆಹಲಿ : ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ಸದಸ್ಯತ್ವವನ್ನು ಸುಪ್ರೀಂಕೋರ್ಟ್ ಅಧಿಕೃತವಾಗಿ ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.
ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಪ್ರಾಣೇಶ್ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಅವರಿಗೆ ಭಾರಿ ಹಿನ್ನಡೆಯಾಗಿದೆ.
ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಎಂಲ್ಸಿ ಪ್ರಾಣೇಶ್ ಅವರ ಸದಸ್ಯತ್ವವನ್ನು ಸುಪ್ರೀಂಕೋರ್ಟ್ ಅಧಿಕೃತವಾಗಿ ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಪ್ರಾಣೇಶ್ ಅವರು ಕೇವಲ 6 ಮತಗಳ ಅಲ್ಪ ಅಂತರದಿಂದ ಗೆಲುವು ಸಾಧಿಸಿದ್ದರು.
ಈ ಗೆಲುವಿನ ವಿರುದ್ಧ ಪರಾಜಿತ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರು ಮತ ಚಲಾವಣೆ ಮಾಡಿರುವುದನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ಅವರು ಕಾನೂನು ಮೊರೆ ಹೋಗಿದ್ದರು. ಮೂರೂವರೆ ವರ್ಷಗಳಿಂದ ನಡೆದ ಸುದೀರ್ಘ ವಿಚಾರಣೆಯ ಬಳಿಕ ಸುಪ್ರೀಂ ಕೋರ್ಟ್ ಇಂದು ಅಂತಿಮ ತೀರ್ಪು ಪ್ರಕಟಿಸಿದ್ದು, ಗಾಯತ್ರಿ ಶಾಂತೇಗೌಡ ಅವರ ವಾದವನ್ನು ಪುರಸ್ಕರಿಸಿದೆ.
ಈ ಐತಿಹಾಸಿಕ ತೀರ್ಪಿನ ಹಿನ್ನೆಲೆಯಲ್ಲಿ, ಗಾಯತ್ರಿ ಶಾಂತೇಗೌಡ ಅವರು ಮುಂದಿನ ಒಂದೂವರೆ ವರ್ಷಗಳ ಅವಧಿಗೆ ನೂತನ ವಿಧಾನ ಪರಿಷತ್ ಸದಸ್ಯರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

