ಪಶ್ಚಿಮ ಬಂಗಾಳ:  ಸುಪ್ರೀಂಕೋರ್ಟ್ ನಿರ್ದೇಶನ; 35,726 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Most read

ನವದೆಹಲಿ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ  ಪಶ್ಚಿಮ ಬಂಗಾಳ ಸರ್ಕಾರ 35,726 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹಿಂದಿನ ನೇಮಕಾತಿಯನ್ನು ಅಸಿಂಧುಗೊಳಿಸಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿ ಈ ತಿಂಗಳ ಅಂತ್ಯದಲ್ಲಿ ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸುವಂತೆ ಸೂಚನೆ ನೀಡಿತ್ತು.

ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ 25,753 ಶಿಕ್ಷಕರು ಹಾಗೂ ಇತರ ಸಿಬ್ಬಂದಿಯನ್ನು ಪಶ್ಚಿಮ ಬಂಗಾಳ ಸರ್ಕಾರ ಈ ಹಿಂದೆ ನೇಮಕಾತಿ ಮಾಡಿಕೊಂಡಿತ್ತು. ಆದರೆ ಈ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕೋರ್ಟ್ ಮೊರೆ ಹೋಗಲಾಗಿತ್ತು. ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು ಹೊಸ ಅಧಿಸೂಚನೆ ಹೊರಡಿಸುವಂತೆ ಕಲ್ಕತ್ತಾ ಹೈಕೋರ್ಟ್‌ ಬಂಗಾಳ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 

2024ರ ಏಪ್ರಿಲ್ 22ರಂದು ಕಲ್ಕತ್ತಾ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿಯಿತು. ಅಲ್ಲದೇ, ಹೊಸದಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಹಾಗೂ ಈ ಪ್ರಕ್ರಿಯೆಯನ್ನು ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಹೊಸ ಅಧಿಸೂಚನೆ ಹೊರಡಿಸಿದೆ. ಈ ತೀರ್ಪಿನಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸರ್ಕಾರ ಮುಜುಗರ ಅನುಭವಿಸಿತ್ತು.

More articles

Latest article