ಹೊಸದಿಲ್ಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) IPC 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಪೀಠವು ಈ ಆದೇಶ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನೂ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಸುಮಾರು ಮೂರು ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದರು. ಈಗ ಡಿಕೆಶಿಗೆ ದೊಡ್ಡ ರಿಲೀಪ್ ಸಿಕ್ಕಂತಾಗಿದೆ.