ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಟೀಕೆ: ಪ್ರೊ. ಅಲಿ ಖಾನ್‌ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

Most read

ನವದೆಹಲಿ: ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ‘ಆಪರೇಷನ್ ಸಿಂಧೂರ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿಯಲ್ಲಿ ಬಂಧಿಸಲ್ಪಟ್ಟಿದ್ದ ಅಶೋಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಅಲಿ ಖಾನ್ ಮಹಮೂದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಮಂಜೂರಾಗಿರುವ ಹಿನ್ನೆಲೆಯಲ್ಲಿ ಇಂದು ಸಂಜೆಯೊಳಗೆ ಅಲಿ ಖಾನ್ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸೀಹ್ ಅವರನ್ನು ಒಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ತನಿಖೆಯ ಭಾಗವಾಗಿರುವ ಎರಡೂ ಪೋಸ್ಟ್ ಗಳಿಗೆ ಸಂಬಂಧಿಸಿ ಯಾವುದೇ ಲೇಖನವನ್ನು ಬರೆಯಬಾರದು ಅಥವಾ ಭಾಷಣಗಳನ್ನು ಮಾಡಬಾರದು ಎಂದು ಅಲಿ ಖಾನ್ ಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಆಲಿ ಅವರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು. ಆಲಿ ಅವರನ್ನು ಭಾನುವಾರ ಬಂಧಿಸಲಾಗಿತ್ತು. ಅಲಿ ಅವರ ಹೇಳಿಕೆಯನ್ನು ಪ್ರಶ್ನಿಸಿ ಹರಿಯಾಣ ರಾಜ್ಯ ಮಹಿಳಾ ಆಯೋಗ ಅವರಿಗೆ ನೋಟಿಸ್ ನೀಡಿತ್ತು. ಆದರೆ, ಆಯೋಗವು ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದೆ ಎಂದು ಅಲಿ ಸಮರ್ಥಿಸಿಕೊಂಡಿದ್ದರು.

More articles

Latest article