ಸಿಜೆಪಿ ಪ್ರತಿಭಟನೆ : ವಿದ್ಯಾರ್ಥಿಗೆ ₹5 ಲಕ್ಷ ಬಾಂಡ್‌ ನೋಟಿಸ್‌ ನೀಡಿದ ಜಡ್ಜ್‌ ವಿರುದ್ಧ ಕಿಡಿಕಾರಿದ ಸುಪ್ರೀಂ ಕೋರ್ಟ್

ನವದೆಹಲಿ‌ ಸೆ.9: ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಯೊಬ್ಬರಿಗೆ ಗ್ರೇಟರ್ ನೋಯ್ಡಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ ನೀಡಿದ್ದ ನೋಟಿಸ್‌ ವಿಚಾರವಾಗಿ ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

ಗೌತಮ ಬುದ್ಧ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ಕಾನೂನು ವಿದ್ಯಾರ್ಥಿ ಅಕ್ಷತ್ ತ್ರಿಪಾಠಿ ಅವರಿಗೆ ಸೆಪ್ಟೆಂಬರ್ 4ರಂದು BNSSನ ಸೆಕ್ಷನ್ 130ರ ಅಡಿಯಲ್ಲಿ ನೋಟಿಸ್ ನೀಡಲಾಗಿತ್ತು. CJP ಪ್ರಸ್ತಾಪಿಸಿದ್ದ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಇತರರನ್ನು ಪ್ರೇರೇಪಿಸುತ್ತಿದ್ದಾರೆ ಎಂಬ ಪೊಲೀಸ್ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿತ್ತು. ಶಾಂತಿ ಕಾಪಾಡುವಂತೆ ₹5 ಲಕ್ಷ ವೈಯಕ್ತಿಕ ಬಾಂಡ್‌ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿತ್ತು.

ಈ ವಿಚಾರವನ್ನು ಹಿರಿಯ ವಕೀಲ ಬಿಶ್ವಜಿತ್ ಭಟ್ಟಾಚಾರ್ಯ ಅವರು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಗಮನಕ್ಕೆ ತಂದರು. ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಹಾಗೂ ವಿ. ಮೋಹನಾ ಅವರನ್ನೊಳಗೊಂಡ ಪೀಠವು, CJP ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಈಗಾಗಲೇ ಸ್ಪಷ್ಟ ಆದೇಶ ನೀಡಿರುವಾಗ ಮ್ಯಾಜಿಸ್ಟ್ರೇಟ್‌ ಇಂತಹ ನೋಟಿಸ್‌ ನೀಡಿದ್ದು ಹೇಗೆ ಎಂದು ಪ್ರಶ್ನಿಸಿತು. 

ಸೆಪ್ಟೆಂಬರ್ 1ರಂದು ಸುಪ್ರೀಂ ಕೋರ್ಟ್ CJP ನೇತೃತ್ವದ ಜುಲೈ ಪ್ರತಿಭಟನೆಗಳಿಗೆ ಸಂಬಂಧಿಸಿದ ದೇಶಾದ್ಯಂತದ FIRಗಳನ್ನು ರದ್ದುಗೊಳಿಸಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ಮತ್ತಷ್ಟು ಬಲವಂತದ ಅಥವಾ ದಂಡಾತ್ಮಕ ಕ್ರಮ ಕೈಗೊಳ್ಳಬಾರದು ಎಂದೂ ನಿರ್ದೇಶಿಸಿತ್ತು. 

“ವಿದ್ಯಾರ್ಥಿಗಳ ವಿರುದ್ಧ ಯಾವುದೇ ದಂಡಾತ್ಮಕ ಕ್ರಮ ಕೈಗೊಳ್ಳಬಾರದು ಎಂಬುದು ನಮ್ಮ ಆದೇಶದಲ್ಲಿ ಸ್ಪಷ್ಟವಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ನೋಟಿಸ್‌ ಅನ್ನು ದಾಖಲೆಗೆ ಸಲ್ಲಿಸುವಂತೆ ಸೂಚಿಸಿದ ಪೀಠ, ಗ್ರೇಟರ್ ನೋಯ್ಡಾ ಅಧಿಕಾರಿಗಳಿಂದ ಈ ಕುರಿತು ವಿವರಣೆ ಪಡೆಯುವುದಾಗಿ ತಿಳಿಸಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ನೋಟಿಸ್‌ ನೀಡಿದ ಮರುದಿನವೇ ಅದನ್ನು ಹಿಂಪಡೆಯಲಾಗಿತ್ತು.

More articles

Latest article

Most read