ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಸುಪ್ರಿಂಕೋರ್ಟ್ ಭವಾನಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಹೌದು, ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಎಸ್ಐಟಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ನ್ಯಾ. ಸೂರ್ಯಕಾಂತ್, ಉಜ್ಜಲ್ ಭುಯಾನ್ ಅವರಿದ್ದ ದ್ವಿ ಸದಸ್ಯ ಪೀಠ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿತು.
ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಲು ಭವಾನಿ ಅವರು ನಿರ್ದೇಶನ ನೀಡಿದ್ದರು. ಮ್ಯಾಜಿಸ್ಟ್ರೇಟ್ ಮುಂದೆ ಈ ಹೇಳಿಕೆ ದಾಖಲಾಗಿದೆ. ಆಕೆ ಆರೋಪದಿಂದ ಮುಕ್ತ ಎನ್ನುವಂತಿಲ್ಲ, ವಿಚಾರಣೆ ಎದುರಿಸಬೇಕು. ಆಕೆಯನ್ನ ಬಂಧನದಿಂದ ರಕ್ಷಿಸಲು ಹೈಕೋರ್ಟ್ ಕಾರಣ ನೀಡಿದೆ. ವಿಚಾರಣಾ ನ್ಯಾಯಾಲಯವೂ ನಿರೀಕ್ಷಣಾ ಜಾಮೀನು ತಿರಸ್ಕರಿಸಿದೆ. ಆದರೆ, ಜಾಮೀನು ಏಕೆ ತಿರಸ್ಕಾರವಾಯಿತೆಂದು ಹೈಕೋರ್ಟ್ ಪರಿಗಣಿಸಿಲ್ಲ ಎಂದು ಅಪಹರಣದ ಕುರಿತು ಪ್ರಕರಣವಿದು ಅಂತ ಕಪಿಲ್ ಸಿಬಲ್ ಮನವರಿಕೆ ಮಾಡಿದರು.
ಮೇಲ್ಮನವಿ ಅರ್ಜಿಯ ವಾದ ಆಲಿಸಿದ ಸುಪ್ರೀಂಕೋರ್ಟ್, ಭವಾನಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆ ಮುಂದೂಡಿದೆ. ಹೀಗಾಗಿ ಭವಾನಿ ರೇವಣ್ಣ ಕಿಡ್ನ್ಯಾಪ್ ಕೇಸ್‌ನಲ್ಲಿ ಸಂಕಷ್ಟ ಎದುರಾಗಿದೆ.