ಮದ್ಯದ ನೀತಿ ವಿಷಯಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದು, ಜಾಮೀನು ಕೋರಿ ಸುಪ್ರೀಂ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಧೀಶರು ವಿಚಾರಣೆಯಿಂದಲೇ ಹಿಂದೆ ಸರಿದಿದ್ದಾರೆ.
ಪ್ರಕರಣದಲ್ಲಿ ಜಾಮೀನು ಕೋರಿ ಸಿಸೋಡಿಯಾ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಸಂಜೀವ್ ಖನ್ನಾ, ಸಂಜಯ್ ಕರೋಲ್ ಮತ್ತು ಸಂಜಯ್ ಕುಮಾರ್ ಈ ಪ್ರಕರಣದ ವಿಚಾರಣೆ ನಡೆಸಬೇಕಾಗಿತ್ತು, ಆದರೆ ಇದೀಗ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕುಮಾರ್ ಹಿಂದೆ ಸರಿದಿದ್ದಾರೆ.
ಮನೀಶ್ ಸಿಸೋಡಿಯಾ ಅವರ ಅರ್ಜಿಯನ್ನು ಮತ್ತೊಂದು ಪೀಠವು ವಿಚಾರಣೆ ನಡೆಸಲಿದ್ದು, ಅದರಲ್ಲಿ ನ್ಯಾಯಮೂರ್ತಿ ಸಂಜಯ್ ಕುಮಾರ್ ಭಾಗಿಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.
ಮನೀಶ್ ಸಿಸೋಡಿಯಾ ಅವರು ಸುಮಾರು 16 ತಿಂಗಳಿನಿಂದ ಜೈಲಿನಲ್ಲಿದ್ದು, ಹಲವು ಬಾರಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಜಾಮೀನು ದೊರಕಿಲ್ಲ.