ನವದೆಹಲಿ: ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಅಲ್ಲ ಎಂಬ ಅಲಹಾಬಾದ್ ಹೈಕೋರ್ಟ್ ನ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡ ನೀಡಿದೆ. ಮೇಲ್ನೋಟಕ್ಕೆ ಪೋಕ್ಸೊ ಕಾಯಿದೆ ಅಡಿಯಲ್ಲಿ ಲೈಂಗಿಕ ದೌರ್ಜನ್ಯವಾಗುತ್ತದೆ ಎಂದೂ ಸುಪ್ರೀಂಕೊರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಇಂತಹ ಕೃತ್ಯಕ್ಕೆ ಶಿಕ್ಷೆಯ ಪ್ರಮಾಣ ಕಡಿಮೆ ಇರುತ್ತದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠ ಬುಧವಾರ ಸ್ವಯಂಪ್ರೇರಣೆಯಿಂದ ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಅಲಹಾಬಾದ್ ಹೈಕೋರ್ಟ್ ನ ತೀರ್ಪು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಸುಪ್ರೀಂಕೋರ್ಟ್ ಪೀಠವೂ ಈ ತೀರ್ಪಿಗೆ ಅಚ್ಚರಿ ವ್ಯಕ್ತಪಡಿಸಿದೆ.
ಭಾರತ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ಈ ಪ್ರಕರಣ್ಕೆ ಸಂಬಂಧಪಟ್ಟ ಎಲ್ಲರಿಗೂ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ತುಷಾರ್ ಮೆಹ್ತಾ ಅವರು ಹಾಜರಾಗಿ ತೀರ್ಪನ್ನು ಒಪ್ಪಲಾಗದು ಎಂದರು. ʼವಿ ದ ವಿಮೆನ್ ಆಫ್ ಇಂಡಿಯಾʼ ಪರವಾಗಿ ಹಿರಿಯ ವಕೀಲೆ ಶೋಭಾ ಗುಪ್ತಾ ಅವರು ಕೋರ್ಟ್ ಗೆ ಪತ್ರ ಬರೆದಿದ್ದರು.
‘ಅತ್ಯಾಚಾರ ಎಂದರೇನು’ ಎಂಬ ಬಗ್ಗೆ ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪನ್ನು ಕಾನೂನು ತಜ್ಞರು ಸೇರಿದಂತೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಇಂತಹ ಹೇಳಿಕೆಗಳಿಂದಾಗಿ ನ್ಯಾಯಾಂಗದ ಮೇಲಿನ ಸಾರ್ವಜನಿಕ ವಿಶ್ವಾಸ ಕುಸಿಯುತ್ತಿದೆ ಎಂದು ಟೀಕಿಸಲಾಗಿತ್ತು.
ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರು ಮಾರ್ಚ್ 17ರಂದು ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಆಗುವುದಿಲ್ಲ. ಅದು ವಿವಸ್ತ್ರಗೊಳಿಸಿ ಹಲ್ಲೆ ನಡೆಸುವ ಅಪರಾಧ ಎಂದು ಹೇಳಿದ್ದರು.
ಪ್ರಕರಣದ ಹಿನ್ನೆಲೆ : ಈ ಪ್ರಕರಣ 2021ರ ನವೆಂಬರ್ 10ರಂದು ನಡೆದ ಘಟನೆಗೆ ಸಂಬಂಧಿಸಿದ್ದಾಗಿದೆ. ಅಂದು ಸಂಜೆ ದೂರುದಾರ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳು ತಮ್ಮ ಸಂಬಂಧಿಯ ಮನೆಯಿಂದ ಮರಳುತ್ತಿದ್ದರು. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅವರದ್ದೇ ಗ್ರಾಮದ ಮೂವರು ಯುವಕರಾದ ಪವನ್, ಆಕಾಶ್ ಮತ್ತು ಅಶೋಕ್ ಭೇಟಿಯಾಗಿದ್ದರು. ಪವನ್ ಎಂಬಾತ ಮಹಿಳೆಯ ಮಗಳನ್ನು ತನ್ನ ಬೈಕ್ನಲ್ಲಿ ಮನೆಗೆ ಕರೆದೊಯ್ಯುವುದಾಗಿ ಹೇಳಿದ್ದ. ಆತನನ್ನು ನಂಬಿದ ಸಂತ್ರಸ್ತೆ ಮಗಳನ್ನು ಕಳುಹಿಸಿದ್ದರು. ಬಾಲಕಿಯನ್ನು ಕರೆದೊಯ್ದ ಆರೋಪಿಗಳು ದಾರಿ ಮಧ್ಯದಲ್ಲಿ ಬೈಕ್ ನಿಲ್ಲಿಸಿ ಬಾಲಕಿ ಮೇಲೆ ಹಲ್ಲೆ ನಡೆಸಿದ್ದಾರೆ. ಪವನ್ ಮತ್ತು ಆಕಾಶ್ ಬಾಲಕಿಯ ಸ್ತನಗಳನ್ನು ಹಿಡಿದು, ಆಕೆಯ ಪೈಜಾಮದ ಲಾಡಿಯನ್ನು ಬಿಚ್ಚಿ, ಪೈಜಾಮವನ್ನು ಕೆಳಗೆ ಎಳೆಯಲು ಯತ್ನಿಸಿದ್ದರು. ಈ ವೇಳೆಗೆ ಸ್ಥಳೀಯರು ಸ್ಥಳಕ್ಕೆ ಬಂದ ಕಾರಣ, ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸುಪ್ರೀಂಕೋರ್ಟ್ ಭರತ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ಈ ಪ್ರಕರಣ್ಕೆ ಸಂಬಂಧಪಟ್ಟ ಎಲ್ಲರಿಗೂ ನೋಟಿಸ್ ನೀಡಿದೆ. ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ತುಷಾರ್ ಮೆಹ್ತಾ ಅವರು ಹಾಜರಾಗಿ ತೀರ್ಪನ್ನು ಒಪ್ಪಲಾಗದು ಎಂದರು. ʼವಿ ದ ವಿಮೆನ್ ಆಫ್ ಇಂಡಿಯಾʼ ಪರವಾಗಿ ಹಿರಿಯ ವಕೀಲೆ ಶೋಭಾ ಗುಪ್ತಾ ಅವರು ಕೋರ್ಟ್ ಗೆ ಪತ್ರ ಬರೆದಿದ್ದರು.